Connect with us

  LATEST NEWS

  ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಕೋಟ ಶ್ರೀನಿವಾಸ ಪೂಜಾರಿ ಪ್ರಚಾರ

  ಮಂಗಳೂರು ಎಪ್ರಿಲ್ 26: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರ ಪರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ಭರ್ಜರಿ ಪ್ರಚಾರ ನಡೆಸಿದರು.


  ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹತ್ತು ಹಲವು ಅಭಿವೃದ್ಧಿ ಕಾರ್ಯಗಳು, ನೂರಾರು ಜನಪರ ಯೋಜನೆಗಳು, ಜನರ ಮನ-ಮನೆ ತಲುಪಿವೆ. ಹಾಗಾಗಿಯೇ ಜನರು ಬಿಜೆಪಿ ಸರಕಾರವೇ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂದು ಬಯಸಿದ್ದಾರೆ.

  ಜಿಲ್ಲೆಯ ಎಂಟು ಕ್ಷೇತ್ರಗಳಲ್ಲೂ ಈಗಾಗಲೇ ಮತದಾರರನ್ನು ಸಂಪರ್ಕಿಸಿದ್ದೇನೆ. ಎಲ್ಲೆಡೆ ಬಿಜೆಪಿ ಪರ ಅಲೆ ಇರುವುದರಿಂದ ಈ ಬಾರಿ 8 ಕ್ಷೇತ್ರಗಳಲ್ಲಿಯೂ ಬಿಜೆಪಿ ಕ್ವೀನ್ ಸ್ವೀಪ್ ಸಾಧಿಸುವ ಮೂಲಕ ಪ್ರಾಬಲ್ಯ ಮೆರೆಯಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು
  ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿಯ ಮುಖಂಡರು, ಹಲವು ಕಾರ್ಯಕರ್ತರು ಹಾಜರಿದ್ದರು.

  Share Information
  Advertisement
  Click to comment

  You must be logged in to post a comment Login

  Leave a Reply