Connect with us

    LATEST NEWS

    ಸಿಂಪಲ್ ಕೋಟ ಶ್ರೀನಿವಾಸ ಪೂಜಾರಿ ಕೋಟ್ಯಾಧೀಶ – 3.5 ಕೋಟಿ ಆಸ್ತಿ ಇರುವ ಕೋಟ ಶ್ರೀನಿವಾಸ ಪೂಜಾರಿ

    ಉಡುಪಿ ಎಪ್ರಿಲ್ 03: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರದ ಜೊತೆ ತಮ್ಮ ಆಸ್ತಿ ವಿವರ ಸಲ್ಲಿಸರುವ ಕೋಟ ಶ್ರೀನಿವಾಸ ಪೂಜಾರಿ ಕುಟುಂಬ 3.5 ಕೋಟಿ ಒಡೆಯ.


    ತಮ್ಮ ಅಫಿಡವಿಟ್ ನಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು ಪತ್ನಿ ಶಾಂತಾ ಮಕ್ಕಳಾದ ಸ್ವಾತಿ, ಶಶಿಧರ್ ಹಾಗೂ ಶ್ರುತಿ ಅವರ ಹೆಸರಿನಲ್ಲಿ ಇರುವ ಆಸ್ತಿಗಳ ವಿವರವನ್ನು ಸಲ್ಲಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ಕೈಯಲ್ಲಿ 90 ಸಾವಿರ ನಗದು ಹಣ ಇದ್ದು, ಹೆಂಡತಿ ಕೈಯಲ್ಲಿ 20 ಸಾವಿರ ಹಣ ಇದೆ. ಅಫಿಡವಿಟ್ ನಲ್ಲಿರುವ ಮಾಹಿತಿ ಪ್ರಕಾರ ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬ ಸ್ಥಿರಾಸ್ತಿ ಹಾಗೂ ಚರಾಸ್ತಿಯ ಒಟ್ಟು ಮೌಲ್ಯ 3,58,91,020 ರೂಪಾಯಿ ಆಗಿದೆ.  ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬದ ಒಟ್ಟು 1,04,44,645 ರೂಪಾಯಿ ಸಾಲ ಹೊಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply