Connect with us

LATEST NEWS

ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ

ಬೆಂಗಳೂರು ಫೆಬ್ರವರಿ 19: ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು ಹೊರವಲಯದ ಬಿಡದಿ ಬಳಿ ನೈಸ್ ರಸ್ತೆಯಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಕಾರನ್ನು ತಿರುಗಿಸುತ್ತಿದ್ದಾಗ ಕೆಎಸ್ಸಾರ್ಟಿಸ್ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿಗೆ ಸ್ವಲ್ಪ ಹಾನಿಯಾಗಿದೆ. ಘಟನೆಯಲ್ಲಿ ಸಚಿವ ಕೋಟ ಶ್ರೀನಿವಾಸ್ ಮತ್ತು ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಕುಂಬಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.