Connect with us

    LATEST NEWS

    ಕೋಟ ಶ್ರೀನಿವಾಸ ಪೂಜಾರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ​ ಸಮನ್ಸ್

    ಬೆಂಗಳೂರು ಎಪ್ರಿಲ್ 05: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸಮನ್ಸ್ ಜಾರಿ ಮಾಡಿದೆ.


    ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಆರ್.ಮೆಂಡನ್​ ಅವರಿಗೂ ಸಹ ಮೇ 27ರಂದು ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಸಮನ್ಸ್​ ಜಾರಿ ಮಾಡಿ ಆದೇಶ ಹೊರಡಿಸಿದೆ.

    ಮಾರ್ಚ್​ 30ರಂದು ಕಟಪಾಡಿ ಖಾಸಗಿ ಕಾಲೇಜು ಆವರಣದಲ್ಲಿ ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೇ ಪ್ರಚಾರ ಸಭೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ್ದರು. ಇನ್ನು ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮೇ 27ರಂದು ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *