LATEST NEWS
ವಿಧಾನ ಪರಿಷತ್ ನಲ್ಲಿ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ಬೆಂಗಳೂರು ಡಿಸೆಂಬರ್ 25: ಮೇಲ್ಮನೆ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಿಸಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದಲ್ಲಿ ಎರಡನೇ ಹಂತದ ಅಧಿಕಾರ ಹಂಚಿಕೆ ಮಾಡಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಮೇಲ್ಮನೆ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಿಸಲಾಗಿದೆ. ಇದೇ ವೇಳೆ ಅವರನ್ನು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕನಾಗಿ ಅರವಿಂದ್ ಬೆಲ್ಲದ್ ಅವರನ್ನು ನೇಮಕ ಮಾಡಲಾಗಿದೆ. ಕೋಟ ಶ್ರೀನಿವಾಸ ಪೂಜಾರಿ: ಮೇಲ್ಮನೆ ವಿಪಕ್ಷ ನಾಯಕ, ಸುನೀಲ್ ವಲ್ಯಾಪುರೆ : ಪರಿಷತ್ ಉಪ ನಾಯಕ, ಅರವಿಂದ್ ಬೆಲ್ಲದ್: ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪ ನಾಯಕ, ಎನ್. ರವಿಕುಮಾರ್ ಕುಮಾರ್ : ವಿಧಾನ ಪರಿಷತ್ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್: ವಿಧಾನಸಭೆ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.
