Connect with us

    LATEST NEWS

    ಕಾರಂತ ಪ್ರಶಸ್ತಿ – ಧರ್ಮಸಂಕಟದಲ್ಲಿ ಕೋಟ ಶ್ರೀನಿವಾಸ ಪೂಜಾರಿ

    ಕಾರಂತ ಪ್ರಶಸ್ತಿ – ಧರ್ಮಸಂಕಟದಲ್ಲಿ ಕೋಟ ಶ್ರೀನಿವಾಸ ಪೂಜಾರಿ

    ಉಡುಪಿ ಅಕ್ಟೋಬರ್ 7: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ವಿಚಾರದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಧರ್ಮ ಸಂಕಟಕ್ಕೆ ಬಿದ್ದಿದ್ದಾರೆ ಅತ್ತ ಊರಿನ ಪ್ರತಿಷ್ಠೆಯ ಕಾರ್ಯಕ್ರಮ ಸಾಂಗವಾಗಿ ಸಾಗಬೇಕು ಇನ್ನೊಂದೆಡೆ ಪಕ್ಷದ ನಿಲುವಿಗೆ ಬದ್ಧರಾಗಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ.

    ಡಾ ಶಿವರಾಮ ಕಾರಂತ ಪ್ರಶಸ್ತಿ ಆಯ್ಕೆ ವಿಚಾರ ವಿವಾದದ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ನಾನಿಲ್ಲ. ಪ್ರಕಾಶ್ ರೈ ಆಯ್ಕೆಗೂ ನನಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
    ಸಾಮಾಜಿಕ ಜಾಲತಾಣಗಳಲ್ಲಿ ನನ್ನ ವಿರುದ್ಧ ಅನಗತ್ಯ ಆರೋಪ ಮಾಡಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

    ಕಳೆದ 12 ವರ್ಷಗಳಿಂದ ಡಾ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ನೀಡಲಾಗುತ್ತಿದೆ. ಈ ವರೆಗೆ 12 ಮಹನೀಯರಿಗೆ ಕಾರಂತ ಪ್ರಶಸ್ತಿ ನೀಡಲಾಗಿದೆ. ಈ ಹಿಂದಿನ ಪ್ರಶಸ್ತಿ ಆಯ್ಕೆ ಸಮಿತಿಯಲ್ಲೂ ನಾನಿರಲಿಲ್ಲ ಎಂದು ಅವರು ಸಮಜಾಯಿಷಿ ನೀಡಿದ್ದಾರೆ. ಪ್ರಕಾಶ್ ರೈ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರ ವಿರುದ್ಧ ಮಾತನಾಡಿರುವುದು ನೋವಿನ ವಿಚಾರ ಎಂದು ಹೇಳಿದರು ಪ್ರಶಸ್ತಿ ವಿಚಾರದಲ್ಲಿ ಪಕ್ಷದ ನಿಲುವಿಗೆ ತಾವು ಬದ್ಧರಿರುವುದಾಗಿ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply