LATEST NEWS
ತನ್ನ ಆರ್ಥಿಕ ಮೂಲಗಳ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಪತ್ರ ಬರೆದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ ಜುಲೈ 31: ತಾನು ಕಟ್ಟುತ್ತಿರುವ ಮನೆಯ ಆರ್ಥಿಕ ಮೂಲದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರವಾಗುತ್ತಿರುವ ಬಗ್ಗೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬ್ರಹ್ಮಾವರ ತಾಲೂಕಿನ ಗಿಳಿಯಾರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ತನ್ನ ಮನೆಯ ಆರ್ಥಿಕ ಮೂಲ ತನಿಖೆ ನಡೆಸುವಂತೆ ಮಾಜಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ಲೋಕಾಯುಕ್ತರಿಗೆ ಪತ್ರ ಬರೆದಿದ್ದಾರೆ.
ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬ್ರಹ್ಮಾವರ ತಾಲೂಕಿನ ಗಿಳಿಯಾರು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸರಳ ಸಜ್ಜನರಾದವರು ಆರು ಕೋಟಿ ರೂ. ವೆಚ್ಚದ ಗುಡಿಸಲು ಕಟ್ಟುತ್ತಿದ್ದಾರೆ ಪೋಸ್ಟ್ ಹಾಕಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.
ಈ ಬಗ್ಗೆ ಈಗ ಸ್ವತಃ ಕೋಟ ಶ್ರೀನಿವಾಸ ಪೂಜಾರಿಯವರು ಸ್ಪಷ್ಟನೆ ಕೊಟ್ಟಿದ್ದಾರೆ. ಅಲ್ಲದೆ ಲೋಕಾಯುಕ್ತಕ್ಕೆ ತನ್ನ ಆರ್ಥಿಕ ಮೂಲಕದ ಬಗ್ಗೆ ತನಿಖೆ ನಡೆಸಿ ಎಂದು ಪತ್ರ ಬರೆದಿದದ್ದು, ಅದರಲ್ಲಿ ನನ್ನ ಶಾಸಕತ್ವದ ಆರಂಭದಿಂದ ಮೂರು ಬಾರಿ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಒಳಗೊಂಡಂತೆ ನೀಡುವ ಗೌರವಧನ, ಸಂಬಳ, ಇನ್ನಿತರ ಸರ್ಕಾರದ ಆರ್ಥಿಕ ನೆರವು ಮತ್ತು ಸವಲತ್ತು, ನನ್ನ ಮಗನ ಉದ್ದಿಮೆ ಆದಾಯ ಪರಿಗಣಿಸಬೇಕು. ಒಟ್ಟು ಆದಾಯಕ್ಕಿಂತ ನಾನು ನಿರ್ಮಿಸುತ್ತಿರುವ ವಾಸ್ತವ್ಯದ ಮನೆಯ ವೆಚ್ಚ ಹೆಚ್ಚಾಗಿದ್ದರೆ ನನ್ನ ಮೇಲೆಯೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನನ್ನ ಮೇಲೆ ವೃಥಾ ಆರೋಪ ಮಾಡಿ ಸಾರ್ವಜನಿಕ ಜೀವನದಲ್ಲಿ ನನಗೆ ಇರುಸು ಮುರುಸು ತರುತ್ತಿರುವ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪ್ರಸ್ತಾವಿತ ಮನೆಯು 60 ಲಕ್ಷ ರೂ. ಮೌಲ್ಯದ್ದಾಗಿದೆ. ಇದಕ್ಕಾಗಿ 2 ವರ್ಷದ ಹಿಂದೆಯೇ ಅಪೆಕ್ಸ್ ಬ್ಯಾಂ ಕ್ನಲ್ಲಿ 35 ಲಕ್ಷ ರೂ. ಸಾಲ ಪಡೆದಿದ್ದೇ ನೆ. ನನ್ನ ಸಂಬಳ ಹಾಗೂ ಗೌರವಧನದಿಂದ ಈ ಸಾಲ ಚುಕ್ತಾ ಮಾಡಿರುತ್ತೇ ನೆ. ಕಡಿಮೆಯಾದ ಮೊತ್ತಕ್ಕೆ ಎಸ್ಬಿಐ ಬ್ರಹ್ಮಾವರ ವಾರಂಬಳ್ಳಿ ಶಾಖೆಯಲ್ಲಿ 40 ಲಕ್ಷ ರೂಪಾಯಿ ಸಾಲಕ್ಕೆ ಅಪ್ಲಿಕೇಶನ್ ಹಾಕಿದ್ದು, ಸದ್ಯದಲ್ಲೆ ಅದರ ಮೊದಲ ಕಂತು ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.