Connect with us

LATEST NEWS

ಪಾಕಿಸ್ತಾನಕ್ಕೆ ಜೈ ಎಂದವನ ತಕ್ಷಣ ಬಂಧಿಸದ ಸರ್ಕಾರ ಸಿಟಿ ರವಿಯನ್ನ ಕೂಡಲೇ ಅರೆಸ್ಟ್ ಮಾಡಿದೆ – ಕೋಟ ಶ್ರೀನಿವಾಸ ಪೂಜಾರಿ

ಉಡುಪಿ ಡಿಸೆಂಬರ್ 20: ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಅಂದವರ ಬಗ್ಗೆ ಕ್ರಮಕೈಗೊಳ್ಳಿ ಎಂದಾಗ ಸರಕಾರ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ವರದಿ ಬರಲಿ ಎಂದು ಹೇಳಿತ್ತು, ಆದರೆ ಸಿಟಿ ರವಿ ವಿಚಾರದಲ್ಲಿ ಮಾತ್ರ ಸರಕಾರ ಕೂಡಲೇ ಅವರನ್ನು ಅರೆಸ್ಟ್ ಮಾಡಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ ನಡೆಸಿದರು.


ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸಭಾಪತಿಗಳ ಸುಪರ್ದಿಯಲ್ಲಿರುವ ಎಲ್ಲಾ ಕಡತಗಳನ್ನು ತರಿಸಿ ನಡೆದಿರುವ ವಿದ್ಯಮಾನ, ಆಡಿರುವ ಮಾತು ಪ್ರಯೋಗಾಲಯದಲ್ಲಿ ಪರಿಶೀಲನೆ ಆಗಬೇಕು. ಆರೋಪ ಸಾಬೀತಾದ ನಂತರ ಕ್ರಮ ಕೈಗೊಂಡರೆ ಅದಕ್ಕೆ ಅರ್ಥ ಇದೆ. ಆದರೆ ಸುವರ್ಣ ಸುವರ್ಣಸೌಧದಲ್ಲಿ ಸಿಟಿ ರವಿ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಳ ರೀತಿ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಾರೆ. ತಲೆಗೆ ಗಂಭೀರ ಗಾಯವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ವಿಪಕ್ಷವನ್ನು ನಡೆಸಿಕೊಳ್ಳುವ ರೀತಿಯಾ ಇದು? ಎಂದು ಕಿಡಿಕಾರಿದರು.

ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ ಅವರನ್ನು ಭಯೋತ್ಪಾದಕರ ರೀತಿ ಪೊಲೀಸರು ಹೊತ್ತೊಯ್ದಿದ್ದಾರೆ. ಇಡೀ ರಾತ್ರಿ ಮೂರು ನಾಲ್ಕು ಜಿಲ್ಲೆಗಳಲ್ಲಿ ಸುತ್ತಾಡಿಸಿ ಹಿಂಸೆ ಕೊಟ್ಟಿದ್ದಾರೆ. ಸಿಟಿ ರವಿ ತಲೆಗೆ ಗಾಯವಾಗಿ ರಕ್ತ ಸುರಿಯುತ್ತಿದ್ದರು ಚಿಕಿತ್ಸೆ ಕೊಡಿಸದೆ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ಈ ಎಲ್ಲ ವಿದ್ಯಮಾನಗಳ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದರು.

ಶಾಸಕರನ್ನು ಬಂಧಿಸಲು ಸಭಾಪತಿ ಅವರ ಅನುಮತಿ ಬೇಕು. ಆದರೆ ಈ ಸಭಾಪತಿ ಅನುಮತಿ ಪಡೆಯದೆ ಬಂಧಿಸಲಾಗಿದೆ. ಈ ಬೆಳವಣಿಗೆ ರಾಜ್ಯ ಸರ್ಕಾರಕ್ಕೆ ಗೌರವ, ಶೋಭೆ ತರುವುದಿಲ್ಲ. ಚಿಕ್ಕಮಗಳೂರಿನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ಸಹಿತ ನಾಯಕರನ್ನು ಬಂಧನ ಮಾಡುತ್ತಿದ್ದಾರೆ. ನೂರಾರು ಕಾರ್ಯಕರ್ತರ ವಿರುದ್ಧ ಪೊಲೀಸರು ದೂರು ದಾಖಲು ಮಾಡಿದ್ದಾರೆ. ರಾಜ್ಯ ಪೊಲೀಸರು ಆಡಳಿತ ಪಕ್ಷದ ಅಣತಿಯಂತೆ ನಡೆದುಕೊಳ್ಳುವ ಮೂಲಕ ಏನು ಸಂದೇಶ ಕೊಡಲು ಹೊರಟಿದ್ದಾರೆ? ಡಿಕೆ ಶಿವಕುಮಾರ ಹೇಳುವ ದಾಖಲೆಗಳನ್ನು ಕೇಳಲು ಸಾಧ್ಯವಿಲ್ಲ. ಸರ್ಕಾರಿ ದಾಖಲೆಗಳ್ಲಲಿ ಅಧಿಕೃತವಾಗಿ ಪರಿಶೀಲಿಸಿ. ಮೊದಲು ಈಗ ಹಾಕಿರುವ ಕೇಸ್ ವಾಪಸ್ ಪಡೆಯಿರಿ. ಪ್ರಯೋಗಾಲಯದ ವರದಿ ಬಂದ ನಂತರ ಕ್ರಮ ಜರುಗಿಸಿ ಎಂದು ತಾಕೀತು ಮಾಡಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *