ಕರಾವಳಿಗೆ ಸಚಿವ ಸ್ಥಾನ ನೀಡಲು ಸಿಎಂ ಗೆ ಮನವಿ – ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು ಅಗಸ್ಟ್ 22: ಕರಾವಳಿಗೆ ಸಚಿವ ಸ್ಥಾನ ನೀಡದ ವಿಚಾರ ಭುಗಿಲೆದ್ದಿರುವ ಅಸಮಾಧಾನವನ್ನು ತಣ್ಣಗಾಗಿಸಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಂದಾಗಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಸಮರ್ಥನೆ ನೀಡಿರುವ ಕೋಟ ಶ್ರೀನಿವಾಸ ಪೂಜಾರಿ,ಮೊನ್ನೆ 17 ಮಂದಿಯನ್ನು ಮಾತ್ರ ಸಚಿವರನ್ನಾಗಿ ಮಾಡಲಾಗಿದೆ.

ಸರಕಾರಕ್ಕೆ ಬೆಂಬಲ ಕೊಟ್ಟವರನ್ನು ನೋಡಿಕೊಂಡು ಸಂಪುಟ ಮಾಡಿದ್ದಾರೆ.. ಕರಾವಳಿಗೆ ಹೆಚ್ಚು ಸ್ಥಾನಗಳನ್ನು ಕೊಡಬೇಕೆನ್ನುವುದು ಸತ್ಯ. ಈ ಬಗ್ಗೆ ಸಿಎಂ ಭೇಟಿಯಾಗಿ ಕರಾವಳಿಗೆ ಸಚಿವ ಸ್ಥಾನ ಕೊಡಲು ಮನವಿ ಮಾಡಿದ್ದೇವೆ ಅಂತಾ ಹೇಳಿದ್ದಾರೆ.

ಇನ್ನು ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ರಾಗಿ ಆಯ್ಕೆಯಾಗಿರೋದಕ್ಕೆ ಅಪಸ್ವರ ಎತ್ತಿರುವ ಬಸವನಗೌಡ ಪಾಟೀಲ್ ಬಗ್ಗೆ ಸ್ಪಷ್ಟನೆ ನೀಡಿದ ಪೂಜಾರಿ,ನಳಿನ್ ಸಂಘದ ಪ್ರಚಾರಕರಾಗಿ ಮುನ್ನಲೆಗೆ ಬಂದವರು,ಮೋದಿ ಅಮಿತ್ ಷಾ,ಯಡಿಯೂರಪ್ಪ ಕೂಡಾ ಪ್ರಚಾರಕರಾಗಿದ್ದವರು.

ಕರಾವಳಿಯಲ್ಲಿ ಅದ್ಭುತ ವಾಗಿ ಪಕ್ಷ ಸಂಘಟನೆ ಜೊತೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಕೆಲಸ ಮಾಡಿದ ಅನುಭವವಿದೆ. ಮೂರು ವರ್ಷಗಳ ಕಾಲಾವಧಿಯಲ್ಲಿ ಕಾರ್ಯಕರ್ತರ ಮನಸ್ಸು ಮುಟ್ಟಲಿದ್ದಾರೆ ಅಂತಾ ವಿಶ್ವಾಸ ವ್ಯಕ್ಯಪಡಿಸಿದ್ದಾರೆ.

Facebook Comments

comments