LATEST NEWS
ರಾಜ್ಯ ಸರಕಾರದ ವೈಫಲ್ಯಗಳ ಬಗ್ಗೆ ಮಾತನಾಡಿದರೆ ಎಫ್ಐಆರ್ – ಸಂಸದ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು ಮೇ 21: ರಾಜ್ಯ ಸರಕಾರದ ವೈಫಲ್ಯಗಳ ಕುರಿತಂತೆ ಮಾತನಾಡಿದರೆ ಪೊಲೀಸರ ಮೂಲಕ ಎಫ್ಐಆರ್ ದಾಖಲು ಮಾಡಲಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ರಾಜ್ಯ ಕಾಂಗ್ರೇಸ್ ಸರಕಾರದ ವೈಫಲ್ಯಗಳ ಕುರಿತಂತೆ ಚಾರ್ಜ್ ಶೀಟ್ ಬಿಡುಗಡೆ ಮಾಡಿ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನೆ ಏನೂ ಇಲ್ಲ.. ಕೇಂದ್ರ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ರಾಜ್ಯ ಸರಕಾರ ಎರಡು ವರ್ಷ ಕೇವಲ ಧರ್ಮ ಧ್ವೇಷ ಮಾಡುವುದು, ಕೇಂದ್ರ ಸರ್ಕಾರವನ್ನು ದೂರುವುದು, ಪ್ರಧಾನಿಯ ಡ್ರೆಸ್ ಬಗ್ಗೆ ಮಾತನಾಡುವಂತಹ ಬಾಲಿಷ ಮಾಡುತ್ತಿದೆ ಎಂದು ಆರೋಪಿದರು.
ರಾಜ್ಯ ಸರಕಾರದ ವಿರುದ್ದ ಯಾರೇ ಮಾತನಾಡಿದರೂ ಈಗ ಎಫ್ಐಆರ್ ದಾಖಲಿಸಲಾಗುತ್ತಿದೆ ಎಂದರು. ಇತ್ತೀಚೆಗೆ ಬಿಜೆಪಿ ಮಾಜಿ ಕಾರ್ಪೋರೇಟರ್ ಪೊಲೀಸ್ ತನಿಖೆ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಅವರ ಮೇಲೆ ಎಫ್ಐ ಆರ್ ದಾಖಲಾಗಿದೆ ಎಂದರು. ಈ ಸುದ್ದಿಗೋಷ್ಟಿಯಲ್ಲಿ ಶಾಸಕರಾದ ಡಾ. ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಎಂಎಲ್‌ಸಿ ಕಿಶೋರ್ ಕುಮಾರ್ ಬೊಟ್ಯಾಡಿ, ಪ್ರತಾಪ್ ಸಿಂಹ, ಉಪಸ್ಥಿತರಿದ್ದರು.