Connect with us

LATEST NEWS

ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ – ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ

ಉಡುಪಿ ಫೆಬ್ರವರಿ 19: ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ. ಮನ್ನಿಸಿ.. ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ. ಜವಾಬ್ದಾರಿ ನನ್ನದು ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿದ್ದಾರೆ.


ಈ ಬಾರಿ ರಾಜ್ಯ ಸರಕಾರದ ಬಜೆಟ್ ನಲ್ಲಿ ನಾರಾಯಣ ಗುರು ನಿಗಮ ರಚನೆ ಕುರಿತಂತೆ ಯಾವುದೇ ರೀತಿಯ ಘೋಷಣೆ ಮಾಡದ ಹಿನ್ನಲೆ ಬಿಲ್ಲವ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಎಚ್ಚೆತ್ತ ಕರಾವಳಿಯ ಜನಪ್ರತಿನಿಧಿಗಳು ಇದೀಗ ಆಕ್ರೋಶ ತಣ್ಣಗಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ.


ಇದೀಗ ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ. ಮನ್ನಿಸಿ.. ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ. ಜವಾಬ್ದಾರಿ ನನ್ನದು ಎಂದು ಟ್ವೀಟ್ ಮಾಡಿದ್ದಾರೆ. ಬಿಲ್ಲವ, ಈಡಿಗ ಸೇರಿದಂತೆ 26 ಉಪಪಂಗಡಗಳ ನಾರಾಯಣಗುರು ನಿಗಮ ರಚನೆ ಕುರಿತು ಬಹುದಿನಗಳಿಂದ ನಿರಂತರವಾಗಿ ಬೇಡಿಕೆ ಇದ್ದು ಅದು ಈ ಬಾರಿಯ ಬಜೆಟ್​ನಲ್ಲೂ ಈಡೇರದ ಹಿನ್ನೆಲೆಯಲ್ಲಿ ಬಿಲ್ಲವ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

 

Advertisement
Click to comment

You must be logged in to post a comment Login

Leave a Reply