LATEST NEWS
ಕೋಟ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಿಟಿ – 10ಕ್ಕೂ ಅಧಿಕ ಮಂದಿಗೆ ಗಾಯ

ಕೋಟ ಮೇ 15: ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಹೈಸ್ಕೂಲ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಕೇರಳದಿಂದ ಕೊಲ್ಲೂರಿಗೆ ಪ್ರವಾಸಕ್ಕೆ ಹೊರಟ್ಟಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಹೊಡೆದು ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಇಂದಿರಾ ಲ್ಯಾಬ್ ಸಮೀಪದ ಕಂದಕಕ್ಕೆ ಉರುಳಿದೆ.

ಟಿಟಿ ವಾಹನದಲ್ಲೊ ಸುಮಾರು 15 ಜನ ಪ್ರಯಾಣಿಕರಿದ್ದು ಅಪಘಾತದಲ್ಲಿ 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಆಂಬುಲೆನ್ಸ್ ನಲ್ಲಿ ಖಾಸಗಿ ಆಸ್ಪತ್ರೆಗೆ ಸಾಗಿಸಿರುತ್ತಾರೆ.