LATEST NEWS
ಕೋಟೆಕಾರು ಮತ್ತು ವಿಟ್ಲ ಪಟ್ಟಣ ಪಂಚಾಯತ್ ಮತ್ತೆ ಬಿಜೆಪಿ ಅಧಿಕಾರಕ್ಕೆ
ಮಂಗಳೂರು ಡಿಸೆಂಬರ್ 30: ಕೋಟೆಕಾರು ಮತ್ತು ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ.
ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಮರಳಿದೆ. ಬಿಜೆಪಿಗೆ ತನ್ನ ಹಿಂದಿನ ಸಂಖ್ಯೆಯಾದ 12ನ್ನು ಉಳಿಸಿಕೊಂಡರೆ ಕಾಂಗ್ರೆಸ್ ಗಳಿಕೆ 6ರಿಂದ 5ಕ್ಕೆ ಇಳಿದಿದೆ, ಎಸ್ಡಿಪಿಐ ಖಾತೆ ತೆರೆದಿದ್ದು 1 ಸೀಟು ಗಳಿಸಿದೆ.
ಇನ್ನು ಕೋಟೆಕಾರು ಪಟ್ಟಣ ಪಂಚಾಯತ್ನ 17 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡಿದೆ. ಕಳೆದ ಬಾರಿ 11 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ 11 ಸ್ಥಾನಗಳನ್ನು ಪಡೆದರೆ ಕಳೆದ ಬಾರಿ 4 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ 4 ಸ್ಥಾನಗಳನ್ನು ಉಳಿಸಿಕೊಂಡಿದೆ. ಒಂದು ಸ್ಥಾನ ಪಡೆದಿದ್ದ ಎಸ್ಡಿಪಿಐ ಒಂದೇ ಸ್ಥಾನವನ್ನು ಉಳಿಸಿಕೊಂಡಿದೆ.
You must be logged in to post a comment Login