LATEST NEWS
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ -ಮನೆಯಲ್ಲಿ 16 ಕೆಜಿ ಚಿನ್ನ ಬಚ್ಚಿಟ್ಟಿದ್ದ ಷಣ್ಮುಗ ಸುಂದರಂ ಅರೆಸ್ಟ್
ಮಂಗಳೂರು ಜನವರಿ 25: ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಬಂಧಿತರನ್ನು ಷಣ್ಮುಗ ಸುಂದರಂ (65) ಎಂದು ಗುರುತಿಸಲಾಗಿದೆ, ತಮಿಳುನಾಡಿನ ತಿರುವನ್ವೇಲಿಯಲ್ಲಿ ಬಂಧಿಸಿದ್ದಾರೆ. ಪ್ರಕರಣ ಪ್ರಮುಖ ಆರೋಪಿ ಮುರುಗನ್ ಡಿ. ದೇವರ್ ಎಂಬಾತನ ತಂದೆಯಾಗಿರುವ ಷಣ್ಮುಗ ಸುಂದರಂ ದರೋಡೆಕೋರರು ನೀಡಿದ ಚಿನ್ನವನ್ನು ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಿ ಮಂಗಳೂರಿಗೆ ಕರೆ ತರುತ್ತಿದ್ದಾರೆ.
ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಮುರುಗಂಡಿ ದೇವರ್ ಮನೆಯಲ್ಲಿ ಶೋಧ ನಡೆಸಿದ್ದು 16.250 ಕೆ.ಜಿ ಚಿನ್ನವನ್ನ ವಶಕ್ಕೆ ಪಡೆದಿದ್ದಾರೆ. ಷಣ್ಮುಗಂ ಈಗಾಗಲೇ ಬಂಧಿತನಾಗಿರುವ ಮುರುಗಂಡಿ ದೇವರ್ ತಂದೆಯಾಗಿದ್ದು ಮನೆಯಲ್ಲಿ ಬಚ್ಚಿಟ್ಟಿದ್ದ ಚಿನ್ನವನ್ನು ಪೊಲೀಸರು ವಶಪಡಿಸಿರುವುದಾಗಿ ತಿಳಿದುಬಂದಿದೆ. ಷಣ್ಮುಗಂ ಸುಂದರಮ್ ದರೋಡೆ ಪ್ರಕರಣದಲ್ಲಿ ನೇರವಾಗಿ ಭಾಗವಹಿಸದೆ ಆರೋಪಿಗಳಿಗೆ ಸಹಕರಿಸಿರುವುದಾಗಿ ಹೇಳಲಾಗಿದೆ.