LATEST NEWS
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ – ಶೂಟೌಟ್ ಮಾಡಿ ಬಾಯಿಮುಚ್ಚಿಸುವ ಯತ್ನ ಆಗಿದೆ – ಶಾಸಕ ಭರತ್ ಶೆಟ್ಟಿ
ಮಂಗಳೂರು ಜನವರಿ 23: ಮಂಗಳೂರು ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ 100 % ಸ್ಥಳೀಯರ ಕೈವಾಡವಿದ್ದು ಅವರನ್ನು ಬಚಾವ್ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಶಾಸಕ ಡಾ.ವೈ ಭರತ್ ಶೆಟ್ಟಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಎಲ್ಲರ ಬಾಯಿ ಮುಚ್ಚಿಸೋಕೆ ಶೂಟೌಟ್ ಮಾಡಲಾಗಿದೆ, ಈ ಪ್ರಕರಣ ದಲ್ಲಿ ಸ್ಥಳೀಯರ ಕೈವಾಡ ಇರುವ ಬಗ್ಗೆ ಮಾಹಿತಿ ಬಂದಿದೆ, ದರೋಡೆಕೋರರನ್ನು ಈಗ ಬಂಧಿಸಲಾಗಿದೆ. ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಯಾರೋ ಬಚಾವ್ ಮಾಡುತ್ತಿದ್ದಾರೆ. ಅವರನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ ಎಂದು ದೂರಿದರು.
ಪೊಲೀಸರು ನಿಧಾನಗತಿಯ ತನಿಖೆಯನ್ನು ಮಾಡುತ್ತಿದ್ದಾರೆ, ಪ್ರಕರಣದ ಬಗ್ಗೆ ಪೊಲೀಸರು ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ. ಬ್ಯಾಂಕ್ ದರೋಡೆಯಲ್ಲಿ ಸ್ಥಳೀಯರ ಕೈವಾಡವನ್ನ ಮುಚ್ಚಿ ಹಾಕೋ ಪ್ರಯತ್ನ ನಡೆಯುತ್ತಿದೆ ಎಂದರು. ದರೋಡೆಕೋರರನ್ನ ಬಂಧಿಸಿದ್ದಾರೆ ಆದರೆ ಪ್ಲಾನಿಂಗ್ ಮಾಡಿದವರನ್ನು ಕುಮ್ಮಕ್ಕು ನೀಡೋರನ್ಮ ಬಚಾವ್ ಮಾಡಲಾಗುತ್ತಿದೆ. ಸಚಿವರು ಆಗಬೇಕು,ಮುಖ್ಯಮಂತ್ರಿ ಆಗಬೇಕೆಂಬ ಉದ್ದೇಶದಿಂದ ರಾಜಕೀಯ ನಾಯಕರು ಆರೋಪಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ, ಈ ಹಿನ್ನಲೆ ಆರೋಪಿಗೆ ಶೂಟೌಟ್ ಮಾಡುವ ಮೂಲಕ ಬಾಯಿಮುಚ್ಚಿಸುವ ಯತ್ನ ಆಗಿದೆ, ನೈಜ ಆರೋಪಿಗಳು ಯಾರು ದರೋಡೆಕೊರರಿಗೆ ಪೊಲಿಟಿಕಲ್ ಸಪೋರ್ಟ್ ಯಾರು ಕೊಡ್ತಿದ್ದಾರೆ ಈ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಪ್ರಶ್ನಿಸಿದ್ದಾರೆ.