Connect with us

    LATEST NEWS

    ಕೋಟೇಶ್ವರ – ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವಿಧ್ಯಾರ್ಥಿ ಮೇಲೆ ಹರಿದ ಟಿಪ್ಪರ್ ಲಾರಿ

    ಕುಂದಾಪುರ ಅಕ್ಟೋಬರ್ 01: ರಸ್ತೆ ಬದಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿಧ್ಯಾರ್ಥಿ ಮೇಲೆ ಟಿಪ್ಪರ್ ಲಾರಿಯೊಂದು ಹರಿದ ಪರಿಣಾಮ ವಿಧ್ಯಾರ್ಥಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ನಡೆದಿದೆ.


    ಮೃತ ವಿದ್ಯಾರ್ಥಿಯನ್ನು ಧನುಷ್ ಎಂದು ಗುರುತಿಸಲಾಗಿದೆ. ಧನುಷ್ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿಯಾಗಿದ್ದು ಇಂದು ಮಧ್ಯಾಹ್ನ ಕಾಲೇಜು ಮುಗಿಸಿ ತನ್ನ ಸ್ನೇಹಿತರ ಜೊತೆ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಧನುಷ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಧನುಷ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ಘಟನೆ ಸಂಬಂಧ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply