DAKSHINA KANNADA
ಮೈರ, ಚೆನ್ನಯಕೋಡಿ: ಕೋಟಿ ಚೆನ್ನಯ ವೃತ್ತ ಲೋಕಾರ್ಪಣೆ

ಬಂಟ್ವಾಳ ಡಿಸೆಂಬರ್ 04 : ಬಂಟ್ವಾಳ ತಾಲೂಕು ಉಳಿ ಗ್ರಾಮದ ಕಕ್ಯಪದವಿನ ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಬೆಳ್ಳಿ ಹಬ್ಬದ ಪ್ರಯುಕ್ತ ಮೈರ ಸತ್ಯ,ಧರ್ಮ ಜೋಡುಕರೆ ಬಯಲು ಕಂಬಳ ಸಮಿತಿ ಸಹಕಾರದಲ್ಲಿ ಬರ್ಕೆಜಾಲು ಚೆನ್ನಯಕೋಡಿ ಎಂಬಲ್ಲಿ ನಿರ್ಮಿಸಲಾದ ಕೋಟಿ ಚೆನ್ನಯ ವೃತ್ತ ಇದರ ಲೋಕಾರ್ಪಣೆ ಕಾರ್ಯಕ್ರಮ ರವಿವಾರ ನಡೆಯಿತು.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ವೃತ್ತವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಾಮಾಜಿಕ, ಧಾರ್ಮಿಕ ಕಾರ್ಯಗಳ ಜತೆ ತುಳುನಾಡಿನ ಸಂಸ್ಕೃತಿ, ಪರಂಪರೆ ಉಳಿಸುವ ಕಂಬಳ ನಡೆಸುವ ಕಾರ್ಯ ಮಾಡುತ್ತಿರುವ ಶ್ರೀ ರಾಮಾಂಜನೇಯ ಗೆಳೆಯರ ಬಳಗ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ಸಭಾಧ್ಯಕ್ಷ ತೆ ವಹಿಸಿ ಮಾತನಾಡಿ, ಮೈರದ ಜನತೆಯ ಜತೆ ನಿರಂತರ ಒಡನಾಟವಿದ್ದು ಪ್ರೀತಿ ನೀಡಿದ್ದಾರೆ. ಅವರ ಎಲ್ಲ ಕಾರ್ಯಗಳಿಗೆ ಸಹಕಾರ ನೀಡಲಾಗುವುದು ಎಂದರು.