LATEST NEWS
ಪುತ್ತೂರು : ದ್ವಿಚಕ್ರ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿ, ಸಾವರ ಮೃತ್ಯು..!

ಪುತ್ತೂರು :ದ್ವಿಚಕ್ರ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಬಳಿ ಸೋಮವಾರ ನಡೆದಿದೆ.
ಕಡಬ ತಾಲೂಕು ಕೊಂಬಾರು ಮಣಿಭಂಡದ ವಾಸು ಮೃತ ಪಟ್ಟ ಬೈಕ್ ಸವಾರರಾಗಿದ್ದಾರೆ. ಮ್ಯಾಕನಿಕ್ ವೃತ್ತಿ ಮಾಡುತ್ತಿದ್ದ ವಾಸು ಮರ್ದಾಳದಲ್ಲಿ ಗ್ಯಾರೆಜ್ ಹೊಂದಿದ್ದರು. ಬಿಳಿನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬಂದ ವಾಸು ಅವರ ಬೈಕ್ ಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ವಾಸು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ರೂ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಕಲೆ ಹಾಕಿ ಪ್ರಕರಣ ದಾಖಲಿಸಿದ್ದಾರೆ.
