DAKSHINA KANNADA
ರಸ್ತೆ ಬದಿ ನಿಂತಿದ್ದ ಪಿಕಪ್ ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ – ಪಿಕಪ್ ಚಾಲಕ ಸಾವು
ಕಾಸರಗೋಡು ಸೆಪ್ಟೆಂಬರ್ 26: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಿಕಪ್ ಚಾಲಕ ಸಾವನಪ್ಪಿದ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ನಡೆದಿದೆ.
ಮೃತರನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫಾ ( 43) ಎಂದು ಗುರುತಿಸಲಾಗಿದೆ. ಕೆಎಸ್ಆರ್ ಟಿಸಿ ಬಸ್ ನ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಬಸ್ಸು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತಲೆಗೆ ಗಂಭೀರ ಗಾಯಗೊಂಡ ಪಿಕಪ್ ಡ್ರೈವರ್ ಮುಸ್ತಫಾ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ. ಪಿಕಪ್ ವ್ಯಾನ್ ನಲ್ಲಿದ್ದ ಇನ್ನೋರ್ವ ಗಾಯಗೊಂಡಿದ್ದು, ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
You must be logged in to post a comment Login