Connect with us

    LATEST NEWS

    ಕುಕ್ಕೆ ಸುಬ್ರಹ್ಮಣ್ಯ – ಮಂಜೇಶ್ವರ ರಾಜ್ಯ ಹೆದ್ದಾರಿ ಬಳಿ ಬಸ್ ಮುಖಾಮಖಿ ಡಿಕ್ಕಿ ಇಬ್ಬರು ಗಂಭೀರ

    ಕುಕ್ಕೆ ಸುಬ್ರಹ್ಮಣ್ಯ – ಮಂಜೇಶ್ವರ ರಾಜ್ಯ ಹೆದ್ದಾರಿ ಬಳಿ ಬಸ್ ಮುಖಾಮಖಿ ಅಪಘಾತ ಇಬ್ಬರು ಗಂಭೀರ

    ಸುಬ್ರಹ್ಮಣ್ಯ ಜುಲೈ 16: ಕುಕ್ಕೆ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಏನೆಕಲ್ ಬಳಿ SRS,ksrtc ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

    ಕುಕ್ಕೆ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಏನೆಕಲ್ ಬಳಿ ಈ ಘಟನೆ ನಡೆದಿದೆ. ಖಾಸಗಿ ಬಸ್ ಮತ್ತು ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದೆ, ಡಿಕ್ಕಿಯ ರಭಸಕ್ಕೆ ಎರಡೂ ಬಸ್ ಗಳಿದ್ದ ಚಾಲಕರಿಬ್ಬರಿಗೂ ಗಂಭೀರ ಗಾಯಗಳಾಗಿದೆ. ಈ ಘಟನೆಯಲ್ಲಿ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ.

    ಅಪಘಾತ ನಡೆದ ಹಿನ್ನಲೆಯಲ್ಲಿ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply