Connect with us

    LATEST NEWS

    ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸಾವು

    ಉಡುಪಿ ಜುಲೈ 10: ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್‌ನಲ್ಲಿ ಸಂಭಿಸಿದೆ.


    ಮೃತರನ್ನು ಕಟಪಾಡಿಯ ಅಚ್ಚಾದ ನಿವಾಸಿ ಯಶೋಧರ ಆಚಾರ್ಯ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯಶೋಧರ್ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply