DAKSHINA KANNADA
ಕೆಎಸ್ಆರ್ ಟಿಸಿ ಬಸ್ ಮತ್ತು ಆಲ್ಟೋ ನಡುವೆ ಮುಖಾಮುಖಿ ಡಿಕ್ಕಿ…ಐವರು ಗಂಭೀರ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ಮಂಗಳೂರು ಫೆಬ್ರವರಿ 13: ಕೆಎಸ್ಸಾರ್ಟಿಸಿ ಬಸ್ ಮತ್ತು ಆಲ್ಟೋ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಗುಂಡ್ಯ ಸಮೀಪದ ನಡೆದಿದ್ದು, ಈ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಸಮೀಪ ಈ ಘಟನೆ ನಡೆದಿದ್ದು ಕೊಕ್ಕಡದ ಪಟ್ರಮೆಯ ನಿವಾಸಿಗಳು ಆಲ್ಟೋ ಕಾರಿನಲ್ಲಿದ್ದರು.ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಪ್ರಕರಣ ದಾಖಲಾಗಿದೆ.