ಶಿವಮೊಗ್ಗ ಜನವರಿ 14: ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನಪ್ಪಿದ ಘಟನೆ ಘಟನೆ ತೀರ್ಥಹಳ್ಳಿ (Thirthahalli) ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಡೆದಿದೆ.


ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ.

ಚೆನ್ನಗಿರಿಯಿಂದ ಶೃಂಗೇರಿ ಕಡೆಗೆ ಸ್ವಿಫ್ಟ್ ಕಾರಿನಲ್ಲಿ 6 ಜನರು ತೆರಳುತ್ತಿದ್ದರೆ ಮಂಗಳೂರಿನಿಂದ ರಾಯಚೂರು ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ಹೋಗುತ್ತಿತ್ತು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದರೆ ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ.

ಇದನ್ನೂ ಓದಿ- ‘ಟಾಕ್ಸಿಕ್’ ಟೀಸರ್ ನ ಟೀಕೆ ತಾಳಲಾರದೆ ಇನ್​​ಸ್ಟಾ ಡಿಲೀಟ್ ಮಾಡಿದ ನಟಿ?

ಮೃತದೇಹ ತೀರ್ಥಹಳ್ಳಿ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅಪಘಾತದ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.

Share Information