Connect with us

    DAKSHINA KANNADA

    ಸುಳ್ಯ : ಕಂಟೈನರ್ ಲಾರಿ ಮತ್ತು ಕೆಎಸ್ಆರ್ ಟಿಸಿ ಬಸ್ ನಡುವೆ ಅಪಘಾತ…!!

    ಸುಳ್ಯ ನವೆಂಬರ್ 15: ಕಂಟೈನರ್ ಲಾರಿ ಮತ್ತು ಕೆಎಸ್ ಆರ್ ಟಿಸಿ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿರುವ ಘಟನೆ ಕಲ್ಲುಗುಂಡಿ ಸಮೀಪ ಕಡೆಪಾಲದಲ್ಲಿ ಸಂಭವಿಸಿದೆ.


    ಮೈಸೂರು ಕಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಿಲುಕಿದ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದಾರೆ.

    ಅಪಘಾತದಲ್ಲಿ ಲಾರಿಯಲ್ಲಿ ಸಿಲುಕಿದ್ದ ಲಾರಿ ಡ್ರೈವರನ್ನು ಸ್ಥಳೀಯರು ಹರ‌ಸಾಹಸ ಮಾಡಿ ಹೊರ ತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಗಾಯಗೊಂಡ ಕೆಲವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ, ಕೆಲವರನ್ನು ಸಂಪಾಜೆ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಸುಳ್ಯ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply