Connect with us

DAKSHINA KANNADA

ಕೆಎಸ್ಸಾರ್ಟಿಸಿ ಬಸ್ ಸ್ಕೂಟರ್ ಡಿಕ್ಕಿ: ಸಿಸಿಟಿವಿಯಲ್ಲಿ ದಾಖಲಾದ ಅಪಘಾತದ ದೃಶ್ಯ

ಮಂಗಳೂರು ಮಾರ್ಚ್ 22:  ತಲಪಾಡಿ ಚೆಕ್‌ಪೋಸ್ಟ್‌ ಬಳಿ ಅತೀ ವೇಗದಿಂದ ಬಂದ ಸರಕಾರಿ ಬಸ್ಸು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಉದ್ಯಾವರ ನಿವಾಸಿ ತುಳಸಿದಾಸ್‌ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.


ತಲಪಾಡಿಯಲ್ಲಿ ಟಯರ್ ಅಂಗಡಿ ಇಟ್ಟುಕೊಂಡಿದ್ದ ತುಳಸಿ ಅವರು ಮನೆಯಿಂದ ಸ್ಕೂಟರಿನಲ್ಲಿ ಬರುತ್ತಿದ್ದ ಸಂದರ್ಭ, ಡಿವೈಡರ್ ಇರುವ ಪ್ರದೇಶದಲ್ಲಿ ತಿರುಗಿಸುತ್ತಿದ್ದಾಗ ಮಂಗಳೂರಿನಿಂದ ಕಾಸರಗೋಡು ಮಾರ್ಗವಾಗಿ ಬರುತ್ತಿದ್ದ ಕರ್ನಾಟಕ ಸಾರಿಗೆ ಬಸ್​ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸ್ಕೂಟರ್ ಬಸ್ಸಿನಡಿ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಬಸ್-ಸ್ಕೂಟರ್ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.