ಬಂಟ್ವಾಳ ಸೆಪ್ಟೆಂಬರ್ 19: ಕೆಎಸ್ ಆರ್ ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.


ಮೃತರನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ವಗ್ಗ ಕಡೆಯಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಗೆ ಢಿಕ್ಕಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ರಾಜೇಶ್ ಅವರನ್ನು ತತ್‌ಕ್ಷಣ ಆಂಬ್ಯುಲೆನ್ಸ್ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information