Connect with us

DAKSHINA KANNADA

ಬೈಕ್ ಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್ -ಬೈಕ್ ಸವಾರ ಸಾವು

ಪುತ್ತೂರು ಜುಲೈ 16 : ಕೆಎಸ್ಆರ್ ಟಿಸಿ ಬಸ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.


ಗುಂಡ್ಯ ಕಡೆಯಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಆಗಮಿಸಿದ ಬಸ್ ಲಾವತ್ತಡ್ಕ ಸಮೀಪ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಇನ್ನು ಡಿಕ್ಕಿ ಹೊಡೆದ ಮೇಲೆ ಚಾಲಕ ಬಸ್‌ನ ನಿಲ್ಲಿಸದೇ ಪರಾರಿಯಾಗಿದಾನೆ.ತಕ್ಷಣವೇ ಮಾಹಿತಿ ಪಡೆದ ನೆಲ್ಯಾಡಿ ಹೊರ ಠಾಣೆ ಪೊಲೀಸ್ ಸಿಬ್ಬಂದಿಗಳು ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಕೆಎಸ್​​ಆರ್​​ಟಿಸಿ ಬಸ್‌ನ ಚಾಲಕನನ್ನ ಗುಂಡ್ಯ ಸಮೀಪ ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ.