Connect with us

    BELTHANGADI

    ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಡಿಕ್ಕಿ

    ನೆಲ್ಯಾಡಿ, ಸೆಪ್ಟಂಬರ್.25: ಇಂದು ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ.

    ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸು ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

    ಗಾಯಗೊಂಡ ಪ್ರಯಾಣಿಕರನ್ನು ನೆಲ್ಯಾಡಿ ಅಶ್ವಿನಿ ಆಂಬುಲೆನ್ಸ್ ನಲ್ಲಿ ನೆಲ್ಯಾಡಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply