BELTHANGADI
ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಇಬ್ಬರ ಸಾವು
ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಇಬ್ಬರ ಸಾವು
ಬೆಳ್ತಂಗಡಿ ಅಗಸ್ಟ್ 6: ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೆ ಮೃತಪಟ್ಟ ಘಟನೆ ದಕ್ಚಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕೊಕ್ಕಡದ ಸಮೀಪ ಕೌಕ್ರಾಡಿ ಗ್ರಾಮದ ಪಾರ್ಪಿಕಲು ಬಳಿ ತಿರುವಿನಲ್ಲಿ ನಡೆದಿದೆ.
ಮೃತರನ್ನು ಧರ್ಮಸ್ಥಳದ ಮುಳಿಕ್ಕಾರು ಮನೆ ವೀರಪ್ಪ ಮಲೆಕುಡಿಯರವರ ಪುತ್ರ ದಿನೇಶ್ ಪಿ. ಮತ್ತು ಇನ್ನೋರ್ವ ಧರ್ಮಸ್ಥಳದ ಸಂದು ಲೈಟಿಂಗ್ಸ್ ನ ಮಾಲಕ ಸಂದೇಶ್ ಎಂದು ಗುರುತಿಸಲಾಗಿದೆ.
ಧರ್ಮಸ್ಥಳದಿಂದ ಬೆಂಗಳೂರು ಕಡೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಧರ್ಮಸ್ಥಳ ಕ್ಕೆ ತೆರಳುತ್ತಿದ್ದ ಮಾರುತಿ 800 ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮಾರುತಿ ಕಾರಿನಲ್ಲಿದ್ದ ದಿನೇಶ್ ಹಾಗೂ ಸಂದೇಶ್ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಫಘಾತದ ತೀವ್ರತೆಗೆ ಮಾರುತಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯ ಯುವಕರು ಕಾರಿನಿಂದ ಹೊರಗೆ ತೆಗೆದು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕರು ಮೃತಪಟ್ಟಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login