BANTWAL
ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: 13 ಮಂದಿ ಗಾಯ, ಐವರು ಗಂಭೀರ
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ 13 ಮಂದಿಗೆ ಗಾಯವಾಗಿದ್ದು, ಐವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಧರ್ಮಸ್ಥಳದ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ.
ಸ್ಥಳೀಯ ಯುವಕರು ಬಸ್ಸಿನಿಂದ ಪ್ರಯಾಣಿಕರನ್ನು ಹೊರಗೆ ತೆಗೆಯಲು ಸಹಾಯ ಮಾಡಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಒಟ್ಟು 13 ಮಂದಿ ಗಾಯಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪವನ್(30), ನಿಖಿತಾ (29), ಸುಧಾಮ (23), ಹೇಮಾವತಿ (43), ರಾಜಶ್ರೀ (27), ಶೋಭಾ ಶೆಟ್ಟಿ ( 48), ಕಸ್ತೂರಿ ( 68), ಹೇಮಲತಾ ( 40), ವಿಶ್ವನಾಥ ( 70), ಶಾಕೀರ್ (32), ಶಿಲ್ಪಾ ( 16), ಸ್ವಾತಿ ( 16), ತನುಶ್ರೀ (17) ಗಾಯಗೊಂಡವರು, ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ
You must be logged in to post a comment Login