LATEST NEWS
ವಿಕೇಂಡ್ ಕರ್ಪ್ಯೂ ಸಂದರ್ಭ ಧರ್ಮಸ್ಥಳಕ್ಕೆ ಕೆಎಸ್ಆರ್ ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಪತ್ರ
ಮಂಗಳೂರು ಅಗಸ್ಟ್ 20: ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರಸಿದ್ದ ಯಾತ್ರಾಸ್ಥಳಗಳಲ್ಲಿ ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸುವುದನ್ನು ತಡೆಯಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಬಸ್ ಸಂಚಾರ ತಡೆ ಹಿಡಿಯುವಂತೆ ಕೆಎಸ್ಆರ್ ಟಿಸಿ ಡಿಸಿಗೆ ಕೋರಿಕೆ ಪತ್ರವನ್ನು ಬರೆದಿದ್ದಾರೆ.
ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕಟೀಲು ಸೇರಿದಂತೆ ಜಿಲ್ಲೆಯ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ವಿಕೇಂಡ್ ಕರ್ಪ್ಯೂ ಸಂದರ್ಭ ಭಕ್ತರಿಗೆ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಈ ಹಿನ್ನಲೆ ದೇವಸ್ಥಾನಗಳಲ್ಲಿ ವಾಸ್ತವ್ಯಕ್ಕೂ ನಿರ್ಬಂಧ ಇದೆ. ಈಗಾಗಲೇ ವಿಕೇಂಡ್ ಸಂದರ್ಭ ಖಾಸಗಿ ಬಸ್ , ವಾಹನಗಳ ಸಂಚಾರಕ್ಕೆ ನಿರ್ಬಂಧ ವಿದಿಸಲಾಗಿದೆ.
ಆದರೆ ಕೆಎಸ್ಆರ್ ಟಿಸಿ ಬಸ್ ಸಂಚಾರ ನಡೆಸುತ್ತಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಕರ್ನಾಟಕ ರಸ್ತೆ ಸಾರಿಗೆಯ ಮೂರೂ ನಿಗಮಗಳಿಗೆ ಕೋರಿಕೆ ಪತ್ರವೊಂದನ್ನು ಬರೆದಿದ್ದಾರೆ.
ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಇರುವುದರಿಂದ ಶನಿವಾರ ಮತ್ತು ಭಾನುವಾರಗಳಂದು ಈ ಮೂರೂ ನಿಗಮಗಳು ಧರ್ಮಸ್ಥಳಕ್ಕೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಬೇಕೆಂದು ಜಿಲ್ಲಾಧಿಕಾರಿಯವರು ತಮ್ಮ ಪತ್ರದಲ್ಲಿ ಕೋರಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರ್ಗಿ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಹುಬ್ಬಳ್ಳಿ ಇಲ್ಲಿನ ವ್ಯವಸ್ಥಾಪಕ ನಿರ್ದೇಶಕರುಗಳಿಗೆ ದ.ಕ. ಜಿಲ್ಲಾಧಿಕಾರಿಯವರು ಪತ್ರ ಬರೆದಿದ್ದಾರೆ.