Connect with us

    LATEST NEWS

    ತಮಿಳುನಾಡು -ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ – 6 ಮಂದಿ ಸಾವು

    ಚೆನ್ನೈ ಜೂನ್ 19: ಎರಡು ಖಾಸಗಿ ಬಸ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಮಂದಿ ಸಾವನಪ್ಪಿ, 70ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ,


    ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಡಲೂರು ಮತ್ತು ಪನ್ರುತಿ ನಡುವೆ ಎರಡು ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ಒಂದು ಬಸ್‌ನ ಮುಂಭಾಗದ ಟೈರ್ ಒಡೆದ ಪರಿಣಾಮ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬಸ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ತೀವೃತೆಗೆ ಬಸ್ ಗಳ ಸಂಪೂರ್ಣ ನಜ್ಜುಗುಜ್ಜಾಗಿದ್ದು, 6 ಮಂದಿ ಸಾವನಪ್ಪಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply