Connect with us

LATEST NEWS

ಮಂಗಳೂರು – ಕುಡ್ಲದ ಪಿಲಿಪರ್ಬ-2023ರ ಚಪ್ಪರ ಮುಹೂರ್ತ ಕಾರ್ಯಕ್ರಮ

ಮಂಗಳೂರು ಅಕ್ಟೋಬರ್ 15: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಭಾನುವಾರ ಮುಂಜಾನೆ ಜರುಗಿತು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈಗ ಈ ಕಲೆ ಕರಾವಳಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಅಕ್ಟೋಬರ್ 21 ರ ಶನಿವಾರದಂದು ನಡೆಯಲಿರುವ ದ್ವಿತೀಯ ವರ್ಷದ ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 15 ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು ಹಾಗೂ ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸುವ ಎಲ್ಲರಿಗೂ ಸುಸ್ವಾಗತ, ಒಟ್ಟಾರೆಯಾಗಿ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಸಾಧಿಸಲಿ, ಎಂದು ಶುಭ ಹಾರೈಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *