Connect with us

    DAKSHINA KANNADA

    ಪ್ರಧಾನಿ ಮೋದಿಯ ದಿಗ್ವಿಜಯಕ್ಕೆ ಸಜ್ಜುಗೊಂಡ ಕುಡ್ಲ ನಗರಿ..! ನಮೋ ಸ್ವಾಗತಕ್ಕೆ ಕ್ಷಣಗಣನೆ…

    ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಇನ್ನು ಕೆಲವೇ ಸಮಯದಲ್ಲಿ  ಬಂದರು  ನಗರಿ ಮಂಗಳೂರಿಗೆ ಆಗಮಿಸಲಿದ್ದು ,ನಮೋ ಸ್ವಾಗತಕ್ಕೆ ಬಂದರು ನಗರಿ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿದೆ.

    ನಗರ ಲೇಡಿ ಹಿಲ್ ನಾರಾಯಂ ಗುರು ವೃತ್ತಕ್ಕೆ ಆಗಮಿಸಲಿರುವ ಮೋದಿ ಬೃಹ್ಮ ಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ  ಬಳಿಕ ತೆರೆದ ವಾಹನದಲ್ಲಿ ಸುಮಾರು 2 ಕೀ. ಮೀ ರೋಡ್ ಶೋ ನಡೆಸಲಿದ್ದಾರೆ.

    ಮೋದಿ ಅವರನ್ನು ಸ್ವಾಗತಿಸಲು ಈಗಾಗಲೇ ಜಿಲ್ಲೆಯ ಮೂಲೆಮೂಲೆಗಳಿಗೆ ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ರೋಡ್ ಶೋ ನಡೆಯುವ ಎಂ ಜಿ ರಸ್ತೆಯ ಇಕ್ಕೆಲಗಳಲ್ಲೂ ಸೇರಿದ್ದು ತಮ್ಮ ನೆಚ್ಚಿನ ನಾಯಕನನ್ನು ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ. ಮೋದಿ ಭದ್ರತೆಗಾಗಿ ಸುಮಾರು 1, 500 ಪೊಲೀಸರ ನಿಯೋಜನೆಗೊಂಡಿದ್ದು ಪ್ರಧಾನಿ ಮೋದಿಯ ವಿಶೆಷ ಅಂಗರಕ್ಷಕ ಪಡೆ ಎಸ್ಪಿಜಿ ಇದರ  ಸಂಪೂರ್ಣ ಭದ್ರತೆಯ ಜವಾಬ್ದಾರಿ ಹೊತ್ತುಕೊಂಡಿದೆ.

    ಮೋದಿ ರೋಡ್ ಶೋ ನಡೆಸುವ ರಸ್ತೆಯುದ್ದಕ್ಕೂ ಬ್ಯಾರಿಕೇಡ್​ ಅಳವಡಿಕೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. 60 ಮಂದಿ ಶಸ್ತ್ರಸಜ್ಜಿತ ಅಧಿಕಾರಿಗಳು ಮೋದಿಗೆ ಬೆಂಗಾವಲಾಗಿ ಇರಲಿದ್ದಾರೆ. ರೋಡ್​ ಶೋ ಪ್ರದೇಶವನ್ನು ಏರಿಯಲ್​ ವ್ಯೂ ಮೂಲಕ ಪರಿಶೀಲನೆ ನಡೆಸಲಾಗಿದೆ‌. ಲಾಲ್ ಭಾಗ್, ಬಲ್ಲಾಳ್ ಭಾಗ್, ಪಿವಿಎಸ್ ಮೂಲಕ ರೋಡ್ ಶೋ ಬಂದು ನವಭಾರತ ವೃತ್ತದಲ್ಲಿ ರೋಡ್ ಶೋ ಸಮಾಪ್ತಿಯಾಗಲಿದೆ. ಅಲ್ಲಿಂದ ಪ್ರಧಾನಿ ಮಂಗಳೂರು ವಿಮಾನ ನಿಲ್ದಾಣಕ್ಕೆ ನಿರ್ಗಮಿಸಿ ವಿಶೇಷ ವಿಮಾನ ಮೂಲಕ ಕೊಚ್ಚಿಗೆ ಪ್ರಯಾಣ ಬೆಳೆಸಲಿದ್ದಾರೆ..

     


    ಮಂಗಳೂರಿಗೆ ಇದು ಮೋದಿಯ 10 ನೇ ಭೇಟಿ :

    ಮಂಗಳೂರಿಗೆ ಇಂದು ಹತ್ತನೇ ಬಾರಿಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಈ ಹಿಂದಿನ 9 ಭೇಟಿಗಳ ವಿವರ ಈ ಕೆಳಗಿನಂತಿದೆ.

    1. 2013 – ಗುಜರಾತ್ ಸಿಎಂ ಆಗಿದ್ದ ಮೋದಿಯವರು ಆಗ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿದ್ದರು.
    2. 2014 – ಲೋಕಸಭಾ ಚುನಾವಣಾ ಪ್ರಚಾರಕ್ಕೂ ಮೋದಿ ಆಗಮಿಸಿ, ಸಮಾವೇಶದಲ್ಲಿ ಮಾತನಾಡಿದ್ದರು.

    3. 2016 – ಪ್ರಧಾನಿಯಾದ ಬಳಿಕ ಕೇರಳದ ಕೊಚ್ಚಿಗೆ ತೆರಳುವ ಹಾದಿಯಲ್ಲಿ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದು ಕಾರ್ಯಕರ್ತರನ್ನು ಭೇಟಿಯಾಗಿದ್ದರು.

    4. 2017 – ಉಜಿರೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವಸಹಾಯ ಸಂಘಗಳ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದರು. ಆಗ ಕೂಡ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು, ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ಧರ್ಮಸ್ಥಳಕ್ಕೆ ತೆರಳಿದ್ದರು.

    5. 2017 – ಮೋದಿ ಲಕ್ಷದ್ವೀಪಕ್ಕೆ ಹೋಗುವುದಕ್ಕಾಗಿ ಒಂದು ರಾತ್ರಿ ಮಂಗಳೂರಿನಲ್ಲಿ ಉಳಿದುಕೊಂಡಿದ್ದರು. ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವುದು ಮಧ್ಯರಾತ್ರಿ ಆಗಿತ್ತು.

    6. 2018 – ಅಸೆಂಬ್ಲಿ ಚುನಾವಣಾ ಪ್ರಚಾರಕ್ಕಾಗಿ ಬಂದಿದ್ದ ಮೋದಿ ನೆಹರು ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು.

    7. 2019 – ಚುನಾವಣ ಪ್ರಚಾರ ಸಮಾವೇಶಕ್ಕೆ ಬಂದಿದ್ದ ಮೋದಿ, ನೆಹರು ಮೈದಾನದಿಂದ ವಿಮಾನ ನಿಲ್ದಾಣಕ್ಕೆ ತೆರಳುವ ವೇಳೆ ಹಂಪನಕಟ್ಟೆ ಬಳಿ ಭರ್ಜರಿ ಜನ ಸೇರಿತ್ತು. ಜನರ ಉತ್ಸಾಹ ನೋಡಿ ಮೋದಿ ಕಾರಿನ ಬಾಗಿಲು ತೆರೆದು ಜನರ ಕೈ ಕುಲುಕಿದ್ದರು.

    8. 2022 – ವಿವಿಧ ಯೋಜನೆಗಳ ಶಿಲಾನ್ಯಾಸ, ಉದ್ಘಾಟನೆಗೆಂದು ಮಂಗಳೂರಿಗೆ ಆಗಮಿಸಿದ್ದರು.

    9. 2023 – ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಾಗಿ ಮೂಲ್ಕಿಗೆ ಆಗಮಿಸಿದ್ದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *