Connect with us

    LATEST NEWS

    ಕುದ್ರೋಳಿ – ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ ಖತೀಜಾ ರೀನಾ

    ಮಂಗಳೂರು ಫೆಬ್ರವರಿ 5 : ವಿಧ್ಯಾರ್ಥಿನಿಯೊಬ್ಬಳ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುದ್ರೋಳಿಯ ಟಿಪ್ಪುಸುಲ್ತಾನ್ ನಗರದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿ ಖತೀಜಾ ರೀನಾ(16) ಎಂದು ಗುರುತಿಸಲಾಗಿದೆ. ಈಕೆ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.


    ಇಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಪರೀಕ್ಷೆಯಲ್ಲಿ ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಅಂಕ ಸಿಕ್ಕಿದ ಕಾರಣಕ್ಕೆ ಇದರಿಂದ ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ. ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply