LATEST NEWS
ಕುಡುಪು ಗುಂಪು ಹ*ತ್ಯೆ ಪ್ರಕರಣ – ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಸಹಿತ ಮೂವರು ಅಮಾನತು

ಮಂಗಳೂರು ಮೇ 01: ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇ್ಲೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾರ್ ಕೆ ಆರ್ ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ.
ಕುಡುಪಿನಲ್ಲಿ ಕ್ರಿಕೆಟ್ ಮ್ಯಾಚ್ ವೇಳೆ ನಡೆದ ಗಲಾಟೆ ಬಳಿಕ ಗುಂಪೊಂದು ಕೇರಳ ಮೂಲದ ಅಶ್ರಫ್ ಎಂಬವರನ್ನು ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಈ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಇಲಾಖೆ ನಿರ್ಲಕ್ಷವಹಿಸಿತ್ತು ಎಂದು ಆರೋಪಿಸಲಾಗಿತ್ತು.

ಇದೀಗ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಕೆ ಆರ್, ಹೆಡ್‌ಕಾನ್‌ಸ್ಟೇಬಲ್ ಚಂದ್ರ ಪಿ. ಮತ್ತು ಪೊಲೀಸ್ ಕಾನ್‌ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತುಗೊಳಿಸಲಾಗಿದೆ.