Connect with us

LATEST NEWS

ಕುಡುಪು – ಗುಂಪು ಹ*ಲ್ಲೆಯಿಂದ ಕೊ*ಲೆಯಾದ ಯುವಕ ಕೇರಳದ ವಯನಾಡ್ ಮೂಲದ ಅಶ್ರಫ್

ಮಂಗಳೂರು, ಎಪ್ರಿಲ್ 30 : ಕ್ರಿಕೆಟ್ ಪಂದ್ಯಾಟದ ವೇಳೆ ನಡೆದ ಗಲಾಟೆಯಲ್ಲಿ ಗುಂಪಿನಿಂದ ಹಲ್ಲೆಗೊಳಗಾಗಿ ಸಾವನಪ್ಪಿದ್ದ ಯುವಕನ ಗುರುತು ಪುತ್ತೆಯಾಗಿದೆ. ಕೇರಳದ ವಯನಾಡ್ ಮೂಲದ ಅಶ್ರಫ್ ಎಂದು ಗುರುತಿಸಲಾಗಿದೆ.


ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿಯ ಪುಲಪ್ಪಳ್ಳಿ ನಿವಾಸಿಯೆಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಯುವಕನ ಮನೆಯವರು ಮಂಗಳೂರಿಗೆ ಆಗಮಿಸಿ ಮೃತದೇಹವನ್ನು ಗುರುತು ಹಚ್ಚಿದ್ದಾರೆ. ಬಳಿಕ ಮೃತದೇಹವನ್ನು ಅಶ್ರಫ್ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ರಾತ್ರಿಯೇ ಮೃತದೇಹವನ್ನು ಸಂಬಂಧಿಕರು ಕೊಂಡೊಯ್ದಿದ್ದಾರೆ.


ಎಪ್ರಿಲ್ 27ರ ಭಾನುವಾರ ಸಂಜೆ ಕುಡುಪು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಯುವಕ ದೇಶ ವಿರೋಧಿ ಘೋಷಣೆ ಕೂಗಿದ ವಿಷಯದಲ್ಲಿ ವಾಗ್ವಾದ ನಡೆಸಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದರು. ಗುಂಪು ಸೇರಿ ಥಳಿಸಿ ಅಲ್ಲಿಯೇ ಬಿಟ್ಟು ಹೋಗಿದ್ದರಿಂದ ಹಲ್ಲೆಗೀಡಾದ ಯುವಕ ಬಳಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾಗಿ ಪ್ರಕರಣ ದಾಖಲಾಗಿದೆ. ಗುಂಪು ಹತ್ಯೆಯ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಇದೇ ಮೊದಲ ಬಾರಿಗೆ 2023 (BNS 2023) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈ ಕೃತ್ಯದಲ್ಲಿ ಸುಮಾರು 25ಕ್ಕೂ ಅಧಿಕ ಮಂದಿ ಭಾಗವಹಿಸಿರುವ ಸಂಶಯವಿದೆ. ಮೊದಲಿಗೆ 15 ಮಂದಿ ಹಾಗೂ ಮತ್ತೆ ಐವರು ಸೇರಿ ಒಟ್ಟು 20 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡಿ ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ಪತಿಯ ಹೆಸರು ಥಳಕು ಹಾಕಿಕೊಂಡಿದೆ. ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *