DAKSHINA KANNADA
ಚಂಪಾಷಷ್ಠಿ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಂತರ್‌ರಾಜ್ಯ ಮತ್ತು ಅಂತರ್ ಜಿಲ್ಲಾ ಭಕ್ತಾಧಿಗಳಿಗೆ ನಿರ್ಬಂಧ!

ಸುಳ್ಯ ಡಿಸೆಂಬರ್ 15: ಕೊರೊನಾ ಹಿನ್ನಲೆ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಿಸೆಂಬರ್ 17 ರಿಂದ ಡಿಸೆಂಬರ್ 20 ವರೆಗೆ ಎಲ್ಲಾ ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲಾ ಪ್ರಯಾಣಿಕರು ಹಾಗೂ ಭಕ್ತಾಧಿಗಳಿಗೆ ನಿರ್ಬಂಧ ಹೇರಿ ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ. ಆದರೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವ ಸೇವೆಗಳಿಗೆ ಮುಂಗಡ ನೋಂದಾಯಿಸಿಕೊಂಡಿರುವ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಅವಕಾಶ ಕಲ್ಪಿಸಲಾಗಿದೆ.
ದೇವಳದ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾಆರೋಗ್ಯಧಿಕಾರಿಗಳ ಉಲ್ಲೇಖದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿಸೆಂಬರ್ 12 ರಿಂದ ಡಿಸೆಂಬರ್ 26ರ ವರೆಗೆ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ನಡೆಯಲಿದ್ದು, ಕೋವಿಡ್ 19 ಹಿನ್ನಲೆಯಲ್ಲಿ ಕೋವಿಡ್ ಮಾರ್ಗಸೂಚಿಯಂತೆ ಸರಳವಾಗಿ ನೆರವೇರಿಸಲು ತೀರ್ಮಾನಿಸಲಾಗಿದೆ.

ಇಲ್ಲಿನ ಜಾತ್ರಾ ಮಹೋತ್ಸವಕ್ಕೆ ರಾಜ್ಯ, ಹೊರ ರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ. ಪ್ರಸ್ತುತ ಗ್ರಾ.ಪಂ. ಚುನಾವಣೆ ಘೋಷಣೆಯಾಗಿರುವುದರಿಂದ ಅಗತ್ಯ ಸಂಖ್ಯೆಯ ಪೊಲೀಸರ ನಿಯೋಜನೆ ಕಷ್ಟಸಾಧ್ಯವಾಗಿದೆ. ಆದ್ದರಿಂದ ಕೋವಿಡ್ ನಿಯಮ ಪಾಲನೆ ಮಾಡುವ ನೆಲೆಯಲ್ಲಿ ಚಂಪಾಷಷ್ಠಿ ಮಹೋತ್ಸವದ ಸಂದರ್ಭ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಗಣ್ಯರನ್ನು ಅಂತರ್ ಜಿಲ್ಲೆ ಹಾಗೂ ಅಂತರ್ ರಾಜ್ಯದ ಸಾರ್ವಜನಿಕರು ಹಾಗೂ ಭಕ್ತಾಧಿಗಳ ಆಗಮನವನ್ನು ಡಿ.17ರಿಂದ ಡಿ.20ರ ವರೆಗೆ ನಿಷೇದಿಸಿ ಆದೇಶ ಹೊರಡಿಸಿದ್ದಾರೆ.