LATEST NEWS
ಕುಕ್ಕೆ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಕರ್ಣಾಟಕ ಬ್ಯಾಂಕ್ ನಿವೃತ್ತ ಸಿಇಒ ಎಂ.ಎಸ್.ಮಹಾಬಲೇಶ್ವರ ಗೆ ಡಾಕ್ಟರೇಟ್
ಮಂಗಳೂರು ಎಪ್ರಿಲ್ 18:ಶ್ರೀನಿವಾಸ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಕರ್ಣಾಟಕ ಬ್ಯಾಂಕ್ ನಿವೃತ್ತ ಸಿಇಒ ಎಂ.ಎಸ್.ಮಹಾಬಲೇಶ್ವರ ಗೆ ಡಾಕ್ಟರೇಟ್ ಆಫ್ ಲೆಟರ್ಸ್ ಪದವಿ ನೀಡಲಾಗುವುದು ಎಂದು ವಿಶ್ವವಿದ್ಯಾಲಯ ಕುಲಪತಿ ಡಾ. ಪಿ.ಎಸ್.ಐತಾಳ್ ಹೇಳಿದರು
ಎಪ್ರಿಲ್ 20ರಂದು ಬೆಳಿಗ್ಗೆ 9.30ಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯದ ಮುಕ್ಕ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ ನಡೆಯಲಿದೆ ಅಂದು ‘ಕುಕ್ಕೆ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಕರ್ಣಾಟಕ ಬ್ಯಾಂಕ್ ನಿವೃತ್ತ ಸಿಇಒ ಎಂ.ಎಸ್.ಮಹಾಬಲೇಶ್ವರ ಅವರಿಗೆ ಡಾಕ್ಟರೇಟ್ ಆಫ್ ಲೆಟರ್ಸ್ ಪದವಿ ನೀಡಲಾಗುವುದು. ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಕೆ. ರಮೇಶ್ ಅತಿಥಿಯಾಗಿ ಭಾಗವಹಿಸುವರು. ಶ್ರೀನಿವಾಸ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸುವರು’ ಎಂದರು. 794 ಪದವಿ ವಿದ್ಯಾರ್ಥಿಗಳು, 256 ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿ ಒಟ್ಟು 1,500 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. 33 ಚಿನ್ನದ ಪದಕ, 12 ಪಿಎಚ್‌ಡಿ ಪದವಿ, ಮೂರು ಡಿಎಸ್‌ಸಿ, ಎರಡು ಡಿ.ಲಿಟ್ ಪದವಿ ಪ್ರದಾನ ಮಾಡಲಾವುದು ಎಂದು ತಿಳಿಸಿದರು.
You must be logged in to post a comment Login