Connect with us

    DAKSHINA KANNADA

    ಮುಂದಿನ ಆದೇಶದವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎಲ್ಲಾ ಸೇವೆಗಳು ರದ್ದು…!!

    ಬೆಂಗಳೂರು ಜನವರಿ 06: ಕೊರೊನಾ ಪ್ರಕರಣ ಹೆಚ್ಚಳ ಹಿನ್ನಲೆ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಕಾರದ ಆದೇಶದಂತೆ ಎಲ್ಲಾ ರೀತಿಯ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಸರ್ಕಾರದ ಮುಂದಿನ ಆದೇಶದವರೆಗೆ ಯಾವುದೇ ಸೇವೆಗೆ ಅವಕಾಶವಿಲ್ಲ.


    ಜನವರಿ 6 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇದ್ದು, ದೇವಾಲಯದಲ್ಲಿ ಅರ್ಚಕರುಗಳಿಂದ ಸಂಪ್ರದಾಯಂತೆ ನಿತ್ಯ ಪೂಜೆಗಳು ನಡೆಯಲಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ತನಕ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರಗಳಂದು ದೇವರ ದರ್ಶನಕ್ಕೂ ಅವಕಾಶ ಇರುವುದಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply