DAKSHINA KANNADA
ಕೊರೊನಾ ಕಾಟ: ಅಗಸ್ಟ್ 15 ರವರೆಗೆ ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ..ವಾರಾಂತ್ಯ ಭಕ್ತರಿಗೆ ಪ್ರವೇಶವಿಲ್ಲ

ಮಂಗಳೂರು ಅಗಸ್ಟ್ 04: ನೆರೆಯ ಕೇರಳ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಇಂದಿನಿಂದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಕಟೀಲು ಹಾಗೂ ಧರ್ಮಸ್ಥಳದಲ್ಲಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ. ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ವಾರಾಂತ್ಯದಲ್ಲಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ನೆರೆಯ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಕಾರಣದಿಂದ ಹೊರ ಜಿಲ್ಲೆ, ರಾಜ್ಯದವರು ಇಲ್ಲಿಗೆ ತೀರ್ಥಯಾತ್ರೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳದಲ್ಲಿ ಸೇವೆಗಳನ್ನು ಸ್ಥಗಿತ ಮಾಡಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅಗಸ್ಟ್ 15 ವರೆಗೆ ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ಮಾತ್ರವೇ ದೇವಸ್ಥಾನಗಳು ತೆರೆದಿರುತ್ತವೆ. ಅಲ್ಲದೆ ವಾರಾಂತ್ಯಗಳಲ್ಲಿ ಶನಿವಾರ, ಭಾನುವಾರ ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ. ವಸತಿ ಗೃಹದಲ್ಲಿ ತಂಗುವುದಕ್ಕೂ ಅವಕಾಶ ಇಲ್ಲ, ಅಲ್ಲದೆ ದೇವರ ದರ್ಶನಕ್ಕೂ ಅವಕಾಶವಿಲ್ಲ. ಶನಿವಾರ, ಭಾನುವಾರ ಎಲ್ಲಾ ರೀತಿಯ ಉತ್ಸವ, ಸೇವೆ, ತೀರ್ಥ, ಪ್ರಸಾದ, ಮುಡಿಸೇವೆ, ವಸತಿಗಳನ್ನು ನಿರ್ಬಂಧಿಸಿ ಅರ್ಚಕರಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರವೇ ಅವಕಾಶ ಕಲ್ಪಿಸಿದೆ.
ಉಳಿದ ದಿನಗಳಲ್ಲಿ ವಸತಿಗೃಹದಲ್ಲಿ ತಂಗುವವರು 72 ಗಂಟೆಯೊಳಗೆ ಆರ್ಟಿ ಪಿಸಿಆರ್ ಟೆಸ್ಟ್ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರ ಹೊಂದಿರಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಾಗೂ ಕೊವಿಡ್ ಶಿಷ್ಟಾಚಾರ ಪಾಲಿಸುವ ದೃಷ್ಟಿಯಿಂದ ಕೊಠಡಿಗಳಲ್ಲಿ ಹೆಚ್ಚುವರಿ ವ್ಯಕ್ತಿಗಳು ಅವಕಾಶವಿಲ್ಲ. ಎಲ್ಲಾ ಕೊಠಡಿಗಳನ್ನೂ ವಾಸ್ತವ್ಯಕ್ಕೆ ಮುಂಚೆ ಸ್ಯಾನಿಟೈಸ್ ಮಾಡಬೇಕು ಹಾಗೂ ಭಕ್ತಾದಿಗಳು ಮಾಸ್ಕ್ ಧರಿಸಿರಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದ