ವಿಕೇಂಡ್ ನಲ್ಲಿ ಭಕ್ತಾಧಿಗಳಿಂದ ತುಂಬಿ ತುಳುಕುತ್ತಿದ್ದ ಕುಕ್ಕೆ ಸಂಪೂರ್ಣ ಸ್ತಬ್ದ

ಸುಬ್ರಹ್ಮಣ್ಯ ಮಾರ್ಚ್ 22: ಕೊರೊನಾ ಭೀತಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಇಂದು ಕರೆ ನೀಡಿದ ಜನತಾ ಕರ್ಫೂಗೆ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸಂಪೂರ್ಣ ಸ್ತಬ್ದಗೊಂಡಿದೆ.

ಈಗಾಗಲೇ ರಾಜ್ಯ ಸರಕಾರ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ದೇವರ ದರ್ಶನ ವ್ಯವಸ್ಥೆಯನ್ನು ರದ್ದುಪಡಿಸಿದ್ದು, ಈ ಹಿನ್ನಲೆಯಲ್ಲಿ ಕುಕ್ಕೆಯಲ್ಲೂ ಕ್ಷೇತ್ರಕ್ಕೆ ಭಕ್ತಾಧಿಗಳ ಪ್ರವೇಶಕ್ಕೆ ನಿಶೇಧ ಹಾಗೂ ಎಲ್ಲಾ ಸೇವೆಗಳನ್ನು ರದ್ದುಪಡಿಸಲಾಗಿದ್ದು ಈ ಹಿನ್ನಲೆಯಲ್ಲಿ ಸದಾ ಜನಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಕುಕ್ಕೆ ಸುಬ್ರಹ್ಮಣ್ಯ ಇಂದು ಭಿಕೋ ಎನ್ನುತ್ತಿದೆ.

ಸುಬ್ರಹ್ಮಣ್ಯ ಪೇಟೆಯ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿದೆ. ಜನತಾ ಕರ್ಫೂ ಹಿನ್ನಲೆಯಲ್ಲಿ ಜನ ರಸ್ತೆಗಿಳಿಯದೆ ರಸ್ತೆಗಳೆಲ್ಲಾ ಖಾಲಿ ಖಾಲಿಯಾಗಿವೆ.