DAKSHINA KANNADA
ಭಾರೀ ಮಳೆಗೆ ಮುಳುಗಡೆಯಾದ ಕುಮಾರಧಾರ ಸ್ನಾನಘಟ್ಟ

ಪುತ್ತೂರು ಅಗಸ್ಟ್ 3: ಘಟ್ಟ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಗುತ್ತಿದ್ದು, ಭಾರೀ ಮಳೆಗೆ ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾದ ಕಾರಣ ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಕಳೆದ ವರ್ಷ ಈ ವೇಳೆಗಾಗಲೇ ಹಲವು ಬಾರಿ ಮುಳುಗಡೆಗೊಂಡಿದ್ದ ಸ್ನಾನಘಟ್ಟ ಇದೀಗ ಮುಳುಗಡೆಗೊಂಡಿದ್ದು, ಜಿಲ್ಲೆಯಲ್ಲಿ ಸುರಿದ ಮಳೆಯ ಪ್ರಮಾಣದಲ್ಲಾದ ಕುಸಿತದ ಸೂಚನೆಯೂ ಆಗಿದೆ.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳಿಗೆ ಲಾಕ್ ಡೌನ್ ಹಿನ್ನಲೆಯಲ್ಲಿ ತೀರ್ಥಸ್ನಾನಕ್ಕೆ ಅವಕಾಶವನ್ನು ನಿರಾಕರಿಸಲಾಗಿತ್ತು.ಆದರೆ ಆಗಸ್ಟ್ 1 ರ ಬಳಿಕ ಕ್ಷೇತ್ರದಲ್ಲಿ ತೀರ್ಥಸ್ನಾನಕ್ಕೆ ಅವಕಾಶವನ್ನು ಕಲ್ಪಿಸಿರುವ ಕಾರಣ ಹೆಚ್ಚಿನ ಸಂಖ್ಯೆಯ ಭಕ್ತಾಧಿಗಳು ಇದೀಗ ಕುಮಾರಧಾರಾ ಸ್ನಾನಘಟ್ಟದಲ್ಲಿ ತೀರ್ಥಸ್ನಾನಕ್ಕಾಗಿ ಆಗಮಿಸುತ್ತಿದ್ದಾರೆ. ಆದರೆ ಅಪಾಯಕಾರಿಯಾಗಿ ಹರಿಯುತ್ತಿರುವ ನದಿಯಲ್ಲಿ ಇಳಿಯದಂತೆ ಸೂಚನೆ ನೀಡಲು ಭದ್ರತಾ ಸಿಬ್ಬಂದಿಗಳ ಕೊರತೆಯೂ ಕಾಡಿದೆ. ಕೇವಲ ಒರ್ವ ಗೃಹರಕ್ಷಕ ದಳದ ಸಿಬ್ಬಂದಿಯನ್ನು ಸ್ನಾನಘಟ್ಟದಲ್ಲಿ ನಿಯೋಜಿಸಲಾಗಿದ್ದು, ಭಕ್ತಾಧಿಗಳನ್ನು ನಿಯಂತ್ರಿಸುವುದು ಇವರಿಗೆ ಕಷ್ಟಸಾಧ್ಯವೂ ಆಗುತ್ತಿದೆ.