ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಧರ್ಮಸ್ಥಳದಲ್ಲಿ ಮತ್ತೊಂದು ಶಪಥ

ಬೆಳ್ತಂಗಡಿ ಫೆಬ್ರವರಿ 9: ಬಜೆಟ್ ಮಂಡನೆಗೂ ಮುನ್ನ ಶುಕ್ರವಾರ ಬಿಡಗಡೆ ಮಾಡಿದ ಆಡಿಯೋದ ತುಣುಕಿನಲ್ಲಿರುವ ಧ್ವನಿ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರದ್ದು ಎಂಬ ನನ್ನ ಆರೋಪ ಸುಳ್ಳಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಇಂದು ಧರ್ಮಸ್ಥಳದಲ್ಲಿ ಕೆರೆ ಸಂಜೀವಿನಿ ಯೋಜನೆಗೆ ಚಾಲನೆ ನೀಡಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಆಡಿಯೋದಲ್ಲಿರುವ ಧ್ವನಿ ನನ್ನದೇ ಎಂದು ಸಾಭೀತಾದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಸವಾಲು ಹಾಕಿದ್ದಾರೆ. ಆದರೆ ಆ ಧ್ವನಿ ಅವರದ್ದಲ್ಲ ಎಂದು ಅವರು ಸಾಬೀತು ಮಾಡಲಿ. ಆಗ ಅವರ ಬದಲಿಗೆ ನಾನೇ ರಾಜಕೀಯ ನಿವೃತ್ತಿ ಪಡೆಯುವೆ ಮುಖ್ಯಮಂತ್ರಿ ಕುಮಾರಸ್ವಾಮಿ ಸವಾಲೆಸೆದಿದ್ದಾರೆ.

ಇದಕ್ಕೂ ಮುನ್ನ ಸಮಾರಂಭದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಧರ್ಮಸ್ಥಳ ಮುಂಜುನಾಥನ ಜೊತೆ ಚೆಲ್ಲಾಟ ಆಡಿದ್ದ ಪರಿಣಾಮ ನಾನು ಎದುರಿಸಿದ್ದೇನೆ ಎಂದು ತಮ್ಮ ಹಳೆಯ ಆಣೆ ಪ್ರಮಾಣ ಪ್ರಹಸಣ ನೆನಪಿಸಿಕೊಂಡಿದ್ದರು. ಸಮಾರಂಭ ಮುಗಿಯಿತ್ತಿದ್ದಂತೆ ಮತ್ತೆ ಮಂಜುನಾಥ ನ ಸನ್ನಿಧಿಯಲ್ಲಿ ಮತ್ತೊಂದು ಶಪಥ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿ ಅವರು ಆಡಿಯೊ ರೆಕಾರ್ಡಿಂಗ್ ಮಾಡಿಸಿದ್ದು ನಾನಲ್ಲ. ಅಂತಹ ಅವಶ್ಯಕತೆ ನನಗೆ ಇಲ್ಲ. ಯಡಿಯೂರಪ್ಪ ಅದನ್ನು ಮಾಡಿಸಿಕೊಂಡಿದ್ದಾರೆ ಎಂದು ಹೇಳಿದ ಅವರು ಬಿಎಸ್‍ವೈ ಪುತ್ರ, ಯೋಗೇಶ್ವರ್ ಹಾಗೂ ಅಶ್ವಥ್ ನಾರಾಯಣ ಈ ಆಪರೇಷನ್ ಸೂತ್ರಧಾರರಾಗಿದ್ದಾರೆ. ಆ ಆಡಿಯೋದಲ್ಲಿ ಇರೋದು ಯಡಿಯೂರಪ್ಪನವರ ಧ್ವನಿ ಆಗಿದೆ ಎಂದು ಮತ್ತೊಮ್ಮೆ ಎಚ್‍ಡಿಕೆ ಸ್ಪಷ್ಟಪಡಿಸಿದ್ದಾರೆ.

ನಾನು ಮುಖ್ಯಮಂತ್ರಿ ಆಗಿರುವವನು. ನನ್ನ ಪಕ್ಷದ ಶಾಸಕರ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಮೊನ್ನೆ ಒಂದು ಬಾರಿ ಅನುಭವಿಸಿದ್ದಾರೆ. ಅಶ್ವತ್ಥನಾರಾಯಣ, ಯೋಗೇಶ್ವರ್ ಮತ್ತಿತರರು ಈ ಕೆಲಸದ ಸೂತ್ರದಾರರು’ ಎಂದು ಆರೋಪಿಸಿದರು. ಆಡಿಯೊ ಕುರಿತಂತೆ ಸಭಾಧ್ಯಕ್ಷರು ಸೋಮವಾರ ತಮ್ಮ ತೀರ್ಪು ಪ್ರಕಟಿಸಲಿದ್ದಾರೆ. ಆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.