Connect with us

LATEST NEWS

ನಕಲಿ ದಾಖಲೆ ಸೃಷ್ಠಿ – ಕುಂದಾಪುರ ಉಪ ವಿಭಾಗಾಧಿಕಾರಿ ಕೆ. ಮಹೇಶ್ ಚಂದ್ರ ಸಸ್ಪೆಂಡ್

ಉಡುಪಿ ಮಾರ್ಚ್ 30: ಸರಕಾರದ ನಿಯಮ ಮೀರಿ ನಕಲಿಯಾಗಿ ಸೃಷ್ಠಿಸಿದ ಆರೋಪದ ಕುಂದಾಪುರ ಉಪವಿಭಾಗದ ಉಪ ವಿಭಾಗಾಧಿಕಾರಿ ಕೆ. ಮಹೇಶ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.


ಉಪ ವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಅವರಿಗೆ ವಹಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮಹೇಶ್ ಚಂದ್ರ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಾಗ ಬಡಾನಿಡಿಯೂರು ಗ್ರಾಮದಲ್ಲಿ ವಾಣಿಜ್ಯ ಉದ್ದೇಶದ ರೆಸಾರ್ಟ್ ನಿರ್ಮಾಣದ ವಿಚಾರದಲ್ಲಿ ಉದ್ಯಾನ ಮತ್ತು ಬಯಲು ಜಾಗದ ವಲಯದಿಂದ ವಾಣಿಜ್ಯ ವಲಯಕ್ಕೆ ಭೂ ಉಪಯೋಗ ಬದಲಾವಣೆಯ ಕಡತದಲ್ಲಿ ಸರ್ವೆ ನಕ್ಷೆ ಸೇರಿದಂತೆ ವಿವಿಧ ದಾಖಲೆಗಳನ್ನು ನಿಯಮ ಮೀರಿ ನಕಲಿಯಾಗಿ ಸೃಷ್ಟಿಸಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಉಡುಪಿ ಶಾಸಕರು ಮನವಿ ಮಾಡಿದ್ದರು.

ಈ ವಿಚಾರಗಳ ಬಗ್ಗೆ ಸೂಕ್ತ ಸಮಜಾಯಿಷಿ ನೀಡುವಂತೆ ಮಹೇಶ್ ಚಂದ್ರ ಅವರಿಗೆ ಕಾರಣ ಕೇಳಿ ನೋಟಿಸ್‌ ನೀಡಿದ್ದು, ಅದಕ್ಕೆ ತೃಪ್ತಿಕರವಾದ ಸಮಜಾಯಿಷಿ ಸಲ್ಲಿಕೆಯಾಗದೆ ಅವರು ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿಯವರು ಮೇಲಧಿಕಾರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಚಿಕ್ಕಮಗಳೂರು ಉಪವಿಭಾಗಾಧಿಕಾರಿ ರಶ್ಮಿ ಎಸ್. ಆರ್. ಅವರನ್ನು ಕುಂದಾಪುರ ಉಪ ವಿಭಾಗಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *