Connect with us

    LATEST NEWS

    ಕುಂದಾಪುರ – ಅಪಘಾತದಲ್ಲಿ ದಂಪತಿ ಸಾವು…!!

    ಕುಂದಾಪುರ ಜನವರಿ 3:ಕುಂದಾಪುರ ವಿನಾಯಕ ಚಿತ್ರಮಂದಿರದ ಬಳಿ ನಡೆದ ಅಪಘಾತದಲ್ಲಿ ವೃದ್ದ ದಂಪತಿ ಸಾವನಪ್ಪಿದ ಘಟನೆ ನಿನ್ನೆ ಸಂಜೆ ನಡೆದಿದೆ. ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ ಅವರ ಪತ್ನಿ ಸರೋಜಾ ಶೆಡ್ತಿ (60) ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ.


    ಕಾರು ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಸಂಚರಿಸುತ್ತಿತ್ತು ಎನ್ನಲಾಗಿದೆ. ಕುಂದಾಪುರದ ಇವರ ಸಂಬಂಧಿಕರ ಮನೆಗೆ ಹೋಗಿ ವಾಪಸು ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಿಂದ ಮಹಾಬಲ ಶೆಟ್ಟಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ಸರೋಜಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಮಂಜುನಾಥ ವಿರುದ್ಧ ಪ್ರಕರಣ ದಾಖಲಾಗಿದೆ‌.

    Share Information
    Advertisement
    Click to comment

    You must be logged in to post a comment Login

    Leave a Reply