LATEST NEWS
ಕುಂದಾಪುರ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಕುಂದಾಪುರ ಅಕ್ಟೋಬರ್ 18 : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮುಳ್ಳಿಕಟ್ಟೆ ಸಮೀಪದ ಅರಾಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ನಡೆದಿದೆ. ಈ ಅಪಘಾತದಲ್ಲಿ 15ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಂದಾಪುರದಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಚಾಲಕನ ನಿರ್ಲಕ್ಷತನದ ಚಾಲನೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅದೃಷ್ಠವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕುಂದಾಪುರದ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಎಸ್.ಐ ಹರೀಶ್ ಆರ್ ನಾಯ್ಕ್ ಹಾಗೂ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದರು.