Connect with us

    LATEST NEWS

    ಕುಂದಾಪುರ – ಲಂಚಕ್ಕೆ ಕೈಒಡ್ಡಿದ ಅರಣ್ಯ ಇಲಾಖೆಯ ನೌಕರರ ಲೋಕಾಯುಕ್ತ ಬಲೆಗೆ

    ಕುಂದಾಪುರ ನವೆಂಬರ್ 29: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.


    ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ. ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದನು. ಲಂಚ ನೀಡಲು ಒಪ್ಪದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply