LATEST NEWS
ಕುಂದಾಪುರ – ಹಿಜಬ್ ವಿವಾದಕ್ಕೆ ಸೇರ್ಪಡೆಯಾಗುತ್ತಿರುವ ಕಾಲೇಜುಗಳು…!!
ಕುಂದಾಪುರ ಫೆಬ್ರವರಿ 07 : ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದ್ದ ಕುಂದಾಪುರ ಸರ್ಕಾರಿ ಜೂನಿಯರ್ ಕಾಲೇಜಿಗೆ ವಿಧ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿ ಬಂದಿದ್ದಾರೆ. ಈ ಹಿನ್ನಲೆ ವಿದ್ಯಾರ್ಥಿನಿಯರ ಜೊತೆ ಸರ್ಕಾರದ ಆದೇಶ ತಿಳಿಸಿ ಪ್ರಾಂಶುಪಾಲರ ಮಾತುಕತೆ ನಡೆಸಿದ್ದಾರೆ.
ಆದರೆ ಹಿಜಾಬ್ ಧರಿಸಿ ತರಗತಿಗೆ ಹೋಗಲು ವಿದ್ಯಾರ್ಥಿನಿಯರ ಪಟ್ಟು ಹಿಡಿದಿದ್ದು, ಮನವೊಲಿಕೆಗೆ ಸ್ಪಂದಿಸದ ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕೂರಲು ವ್ಯವಸ್ಥೆ ಮಾಡಿದ್ದಾರೆ.
ಇದೇ ವಿದ್ಯಾರ್ಥಿನಿಯರು ಕಳೆದ ವಾರ ಗೇಟಿನಿಂದ ಹೊರಗೆ ಕುಳಿತು ಪ್ರತಿಭಟಿಸಿದ್ದರು.
ಬಸ್ರೂರು ಶಾರದಾ ಕಾಲೇಜಿನಲ್ಲೂ ಹಿಜಾಬ್ ಧರಿಸಿಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಕುಂದಾಪುರದ ಆರ್‌ಎನ್ ಶೆಟ್ಟಿ ಕಾಲೇಜಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಕೋಟೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲೂ ಮೂವರು ವಿಧ್ಯಾರ್ಥಿನಿಯರು ಹಿಜಬ್ ತೊಟ್ಟು ಬಂದಿದ್ದರು. ಈ ಹಿನ್ನಲೆ ಕಾಲೇಜಿನ 15 ವಿಧ್ಯಾರ್ಥಿಗಳು ಕೇಸರಿ ಶಾಲು ತೊಟ್ಟು ಬಂದಿದ್ದು, ಸರ್ಕಾರದ ಆದೇಶ ಉಲ್ಲಂಘಿಸಿದವರನ್ನು ಕಾಲೇಜು ಆಡಳಿತ ಮಂಡಳಿ ಮನೆಗೆ ಕಳುಸಿದೆ. ನಾವು ಸರ್ಕಾರದ ಆದೇಶವನ್ನು ಪಾಲಿಸಿದ್ದೇವೆ, ವಿದ್ಯಾರ್ಥಿಗಳಿಗೆ ನಿಯಮ ಹೇಳಿದ್ದೇವೆ ಅವರು ಕಾಲೇಜಿನ ಅವರಣಕ್ಕೆ ಬಂದಿಲ್ಲ. ನಿಯಮ ಉಲ್ಲಂಘಿಸಿದವರಿಗೆ ಕಾಲೇಜಿನ ಆವರಣಕ್ಕೆ ಅನುಮತಿ ಕೊಟ್ಟಿಲ್ಲ ಎಂದು ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕಿ ಡಾ. ಉಷಾದೇವಿ ಹೇಳಿದ್ದಾರೆ.