LATEST NEWS
ಕುಂದಾಪುರ – ಕಮರ್ಶಿಯಲ್ ಟ್ಯಾಕ್ಸ್ ಸಹಾಯಕ ಆಯುಕ್ತ ರಾಜೇಶ್ ಬೇಳ್ಕೆರೆ ಮನೆ ಮೇಲೆ ಲೋಕಾಯುಕ್ತ ದಾಳಿ

ಕುಂದಾಪುರ ಅಕ್ಟೋಬರ್ 30:ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಕುಂದಾಪುರದಲ್ಲಿರುವ ಕಮರ್ಶಿಯಲ್ ಟ್ಯಾಕ್ಸ್ ಸಹಾಯಕ ಆಯುಕ್ತ ರಾಜೇಶ್ ಬೇಳ್ಕರೆ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕುಂದಾಪುರದ ಸಲೀಂ ಆಲಿ ರಸ್ತೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆ ಅಂಕೋಲದ ರಾಜೇಶ್ ಬೆಳ್ಕೆರೆ ಹಲವು ವರ್ಷದಿಂದ ಕುಂದಾಪುರದಲ್ಲಿ ನೆಲೆಸಿದ್ದಾರೆ. ಏಕಕಾಲದಲ್ಲಿ ಈ ದಾಳಿ ನಡೆದಿದ್ದು ಉಡುಪಿಯಲ್ಲಿರುವ ಕಚೇರಿ ಹಾಗೂ ಅಂಕೋಲದಲ್ಲಿರುವ ಮನೆಯಲ್ಲಿ ತಪಾಸಣೆ ನಡೆಯುತ್ತಿದೆ.
